ದಾವಣಗೆರೆ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದಾವಣಗೆರೆ ವತಿಯಿಂದ ಕರ್ನಾಟಕ ಲೋಕಸೇವಾ ಆಯೋಗ ಇವರು ನಡೆಸುವ ಕೆ.ಎ.ಎಸ್. ಹುದ್ದೆಗಾಗಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲಿರುವ ಪರೀಕ್ಷಾರ್ಥಿಗಳಿಗೆ ಡಿ.9 ರಿಂದ 19 ರವರೆಗೆ ನಗರದ ಶ್ರೀರಾಮನಗರದಲ್ಲಿನ ಗಾಂಧಿ ಭವನದಲ್ಲಿ, ಎಸ್.ಎಸ್.ಹೈಟೆಕ್ ಆಸ್ಪತ್ರೆ ಹಿಂಭಾಗ, ಶ್ರೀರಾಮನಗರ ರಸ್ತೆ, ಇಲ್ಲಿ ಉಚಿತ ಪರೀಕ್ಷಾಪೂರ್ವ ತರಬೇತಿಯನ್ನು ಆಯೋಜಿಸಲಾಗಿದೆ.
ತರಬೇತಿಗೆ ಹಾಜರಾಗಲಿಚ್ಛಿಸುವ ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ (ಬಸ್ಸು ನಂ-103) ತರಬೇತಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ-7406323294 ಯನ್ನು ಸಂಪರ್ಕಿಸಲು ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ ತಿಳಿಸಿದ್ದಾರೆ.