ಮಡಿಕೇರಿ: ಕೊಡಗು ಜಿಲ್ಲೆಯ ಜಿಲ್ಲಾ ಸರ್ಕಾರಿ ವಕೀಲರ ಮತ್ತು ಅಪರ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಯನ್ನು ಭರ್ತಿ ಮಾಡಲು ಸರ್ಕಾರವು ಉದ್ದೇಶಿಸಿದ್ದು, ಈ ಹುದ್ದೆಯನ್ನು ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತು) ಕಾಯಿದೆ, 1977 ರನ್ವಯ ಭರ್ತಿ ಮಾಡಲು ಷರತ್ತುಗಳನ್ವಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್, 14 ರ ಸಂಜೆ 5.30 ಗಂಟೆಗೆ ಕೊನೆಯ ದಿನವಾಗಿದೆ. ಅರ್ಜಿಯನ್ನು ಜಿಲ್ಲಾಧಿಕಾರಿ ಕಚೇರಿ, ಮಡಿಕೇರಿ ಇಲ್ಲಿಗೆ ಸಲ್ಲಿಸಬೇಕು.
ಷರತ್ತುಗಳು: ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಮತ್ತು ಅಪರ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಜಿಲ್ಲಾ ಬಾರ್ ಅಸೋಸಿಯೇಷನಲ್ಲಿ ನೋಂದಾಯಿಸಿರಬೇಕು. ಅಭ್ಯರ್ಥಿಯು ಕನಿಷ್ಠ 10 ವರ್ಷಗಳ ಕಾಲ ವಕೀಲಿ ವೃತ್ತಿಯನ್ನು ಪೂರೈಸಿರಬೇಕು. ಸರ್ಕಾರಿ ನೌಕರರಾಗಿರಬಾರದು. ಸರ್ಕಾರದ ಯಾವುದೇ ಪೂರ್ಣ ಅಥವಾ ಅರೆಕಾಲಿಕ ಹುದ್ದೆಗಳಲ್ಲಿ ಇರಬಾರದು. ಯಾವುದೇ ನಿಗಮ ಮಂಡಳಿ ಮತ್ತು ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರದಲ್ಲಿ ಕಾನೂನು ಸಲಹೆಗಾರರಾಗಿ ಕರ್ತವ್ಯ ನಿರ್ವಹಿಸುತ್ತಿರಬಾರದು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.