alex Certify ಗಮನಿಸಿ : ರಾಷ್ಟ್ರೀಯ ಸಾಗರೋತ್ತರ ವಿದ್ಯಾರ್ಥಿವೇತನ ಯೋಜನೆಯಡಿ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ರಾಷ್ಟ್ರೀಯ ಸಾಗರೋತ್ತರ ವಿದ್ಯಾರ್ಥಿವೇತನ ಯೋಜನೆಯಡಿ ಅರ್ಜಿ ಆಹ್ವಾನ

ಬಳ್ಳಾರಿ : ಕೇಂದ್ರ ಸರ್ಕಾರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು 2024-25 ನೇ ಸಾಲಿಗೆ ರಾಷ್ಟ್ರೀಯ ಸಾಗರೋತ್ತರ ವಿದ್ಯಾರ್ಥಿವೇತನ ಯೋಜನೆಯಡಿ (ಎನ್ಒಎಸ್) ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿವೇತನಕ್ಕೆ ಸ್ನಾತಕೋತ್ತರ ಪದವಿ, ಪಿಹೆಚ್ಡಿ ಮತ್ತು ಉನ್ನತ ವ್ಯಾಸಂಗಕ್ಕೆ ಆಯ್ಕೆಯಾದ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ.

ಆಸಕ್ತ ಅಭ್ಯರ್ಥಿಗಳು https://overseas.tribal.gov.in ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನವಾಗಿರುತ್ತದೆ.ಹೆಚ್ಚಿನ ಮಾಹಿತಿಗಾಗಿ ನಗರದ ನಲ್ಲಚೇರುವು ಪ್ರದೇಶದ ವಾಲ್ಮೀಕಿ ಭವನದ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ದೂ.08392-242453 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...