alex Certify GOOD NEWS : ಮಾಜಿ ಸೈನಿಕರ ಮಕ್ಕಳಿಗೆ ಅನುದಾನ, ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS : ಮಾಜಿ ಸೈನಿಕರ ಮಕ್ಕಳಿಗೆ ಅನುದಾನ, ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಮಿಲಿಟರಿ ಪಿಂಚಣಿ ರಹಿತ ಕರ್ನಾಟಕದ ಮಾಜಿ ಸೈನಿಕರ ಹಾಗೂ ಕರ್ನಾಟಕದಲ್ಲಿ ನೆಲೆಸಿರುವ ಹೊರರಾಜ್ಯದ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ (ಅಧಿಕಾರಿಗಳನ್ನು ಹೊರತುಪಡಿಸಿ) ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಒಂದನೇ ತರಗತಿಯಿಂದ ಪಿ.ಯು.ಸಿ ಎರಡನೇ ವರ್ಷದವರೆಗೆ ಓದುವ ಮಕ್ಕಳಿಗೆ ಪುಸ್ತಕ ಅನುದಾನಕ್ಕಾಗಿ ಮತ್ತು ಡಿಗ್ರಿ / ಡಿಪ್ಲೋಮಾ ಜೆ.ಓ.ಸಿ / ಪ್ರೊಫೆಷನಲ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಶಿಷ್ಯವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಶುಲ್ಕ ರಹಿತ ಅರ್ಜಿಗಳನ್ನು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಛೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ 30-09-2023 ರೊಳಗಾಗಿ ಸಲ್ಲಿಸುವಂತೆ ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಕಛೇರಿಯ ದೂರವಾಣಿ ಸಂಖ್ಯೆ 08182-220925 ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...