alex Certify ಹಿಂದುಳಿದ ವರ್ಗದ ಸಮುದಾಯಕ್ಕೆ ಸಾಲ ಸೌಲಭ್ಯ ನೀಡಲು ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಿಂದುಳಿದ ವರ್ಗದ ಸಮುದಾಯಕ್ಕೆ ಸಾಲ ಸೌಲಭ್ಯ ನೀಡಲು ಅರ್ಜಿ ಆಹ್ವಾನ

ಮಡಿಕೇರಿ : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನಲ್ಲಿ ಡಿ. ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ(ವಾಣಿಜ್ಯ ಬ್ಯಾಂಕ್ಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಗಳಡಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರು https://www.kaushalkar.com/ ಜಾಲತಾಣದಲ್ಲಿ ಅರ್ಜಿ ಸಲ್ಲಿಸಬಹುದು. ಈ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಯನ್ನು ‘ಸೇವಾ ಸಿಂಧು’ ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅಕ್ಟೋಬರ್, 31 ಕೊನೆಯ ದಿನವಾಗಿದೆ. ನಿಗಮದ ವೆಬ್ಸೈಟ್ www.dbcdc.karnataka.gov.in ನ್ನು ಸಂಪರ್ಕಿ ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ಕೊಡಗು ಜಿಲ್ಲೆ, ಮಡಿಕೇರಿ. ದೂ.ಸಂ. 08272-221656 ಮೂಲಕ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...