2021-22ನೇ ಸಾಲಿನಲ್ಲಿ ಜೇನುಕುರುಬ ಸಮುದಾಯದವರ ಜನಾಂಗದ ಸಮಗ್ರ ಅಭಿವೃದ್ಧಿ ಯೋಜನೆಯಡಿ ಕೃಷಿ ಉದ್ದೇಶಕ್ಕಾಗಿ ಡೀಸೆಲ್ ಮೋಟಾರ್ ಮತ್ತು ಪೈಪ್ಗಳ ಖರೀದಿಗೆ, ಕಾಫಿ, ಭತ್ತ ಬೆಳೆಯುತ್ತಿರುವ ಜಮೀನಿಗೆ ತಂತಿಬೇಲಿ ಅಳವಡಿಕೆಗೆ ಸಹಾಯಧನ, ಸರಕು ಸಾಗಾಣಿಕೆ ವಾಹನ ಖರೀದಿಗೆ, ಹಂದಿ ಸಾಕಾಣಿಕೆಗೆ, ಹಸು ಸಾಕಾಣಿಕೆ ಹಾಗೂ ಆಡು/ ಕುರಿ ಸಾಕಾಣಿಕೆಗೆ ಸಹಾಯಧನ ನೀಡುವ ಸಂಬಂಧ ಪರಿಶಿಷ್ಟ ಪಂಗಡದ ಜೇನುಕುರುಬ ಜನಾಂಗದವರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಕಚೇರಿ ವೇಳೆಯಲ್ಲಿ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಹೊಸ ಜಿಲ್ಲಾ ಪಂಚಾಯತ್ ಕಟ್ಟಡ, 1 ನೇ ಮಹಡಿ, ಕೊಡಗು ಜಿಲ್ಲೆ, ಮಡಿಕೇರಿ(08272-200500), ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ವಿರಾಜಪೇಟೆ (9901482763) ಹಾಗೂ ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ (7259552655) ಮತ್ತು ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ (9113860709) ಇಲ್ಲಿ ಪಡೆದು ಆಗಸ್ಟ್, 23 ರೊಳಗೆ ಸಲ್ಲಿಸಬೇಕು.
ಜಾತಿ ದೃಢೀಕರಣ ಪತ್ರ, ಆದಾಯ ದೃಢೀಕರಣ ಪತ್ರ, ಆಧಾರ್ ಕಾರ್ಡ್, ಬಿಪಿಎಲ್. ಪಡಿತರ ಚೀಟಿ, ಅರಣ್ಯ ಹಕ್ಕು ಪತ್ರ/ಆರ್ಟಿಸಿ. ಈ ದಾಖಲೆಗಳನ್ನು ಸಲ್ಲಿಸಬೇಕು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಎಸ್.ಹೊನ್ನೇಗೌಡ ಅವರು ತಿಳಿಸಿದ್ದಾರೆ.