ಶಿವಮೊಗ್ಗ : ರಾಷ್ಟ್ರೀಯ ದತ್ತು ಮಾಸಾಚರಣೆ ಪ್ರಯುಕ್ತ ಪೋಷಕತ್ವ ಯೋಜನೆಯಡಿ ಮಗುವನ್ನು ಪಡೆಯಲು ಅರ್ಹ ಪೋಷಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ 2015, ತಿದ್ದುಪಡಿ 2021, ಸೆಕ್ಷನ್ 44 ಹಾಗೂ ನಿಯಮದಲ್ಲಿ ಉಲ್ಲೇಖಿಸಿದಂತೆ ಮಾರಣಾಂತಿಕ ಕಾಯಿಲೆ, ತೀವ್ರ ಅನಾರೋಗ್ಯ ಸಾವು ಅಥವಾ ಇನ್ನತರೆ ಕಾರಣಗಳಿಂದ ಪೋಷಕರ ಆರೈಕೆಯಿಂದ ವಂಚಿತರಾದ ಮಕ್ಕಳನ್ನು ವಿಸ್ತತ ಕುಟುಂಬ ಸದಸ್ಯರು ಅಥವಾ ಅಸಂಬಂಧಿತ ವ್ಯಕ್ತಿ/ಕುಟುಂಬದಲ್ಲಿ ತಾತ್ಕಾಲಿಕ ಆರೈಕೆ ನೀಡುವ ಹಾಗೂ ಕಾರಣಾಂತರಗಳಿಂದ ದತ್ತು ಸ್ವೀಕಾರಕ್ಕೆ ಒಳಪಡಲು ಸಾಧ್ಯವಿಲ್ಲದ ಮಕ್ಕಳಿಗೆ ತಾತ್ಕಾಲಿಕ ಪೋಷಕರನ್ನು ನೀಡುವ ಪರ್ಯಾಯ ವ್ಯವಸ್ಥೆ ಮಕ್ಕಳನ್ನು ಪುನರ್ವಸತಿ ಮಾಡುವುದು ಹಾಗೂ ಮಕ್ಕಳನ್ನು ಸಾಂಸ್ಥಿಕ ಸೇವೆಗೆ ಒಳಪಡಿಸುವುದನ್ನು ತಪ್ಪಿಸುವುದು ಪೋಷಕತ್ವ ಕಾರ್ಯಕ್ರಮದ ಗುರಿಯಾಗಿದೆ.
ಸಾಮಾನ್ಯವಾಗಿ ಒಂದು ವರ್ಷದವರೆಗೆ ಅಗತ್ಯ ಪ್ರಕರಣಗಳಲ್ಲಿ ಪ್ರತಿ ವರ್ಷ ನವೀಕರಿಸಿ ಪೋಷಕತ್ವಕ್ಕೆ ಆಯ್ಕೆಯಾದ ಕುಟುಂಬ ಸದಸ್ಯರೊಂದಿಗೆ ಆರೈಕೆ ಮತ್ತು ರಕ್ಷಣೆಯ ಉದ್ದೇಶಕ್ಕಾಗಿ ಕೌಟುಂಬಿಕ ವಾತಾವರಣದಲ್ಲಿ ಪೊಷಕರನ್ನು ಇರಿಸಲಾಗುತ್ತದೆ. ಒಂದೇ ರೀತಿಯ ಸಂಸ್ಕೃತಿ, ಬುಡಕಟ್ಟು ಮತ್ತು ಸಮುದಾಯದ ಸಂಪರ್ಕವನ್ನು ಹಂಚಿಕೊಳ್ಳುವ ಕುಟುಂಬಗಳಿಗೆ ಆದ್ಯತೆ ನೀಡಲಾಗುತ್ತದೆ. ಪೋಷಕತ್ವವು ಗುಂಪು ಪೋಷಕತ್ವವನ್ನು ಒಳಗೊಂಡಿರುತ್ತದೆ. ಆದ್ದರಿಂದ ಪೋಷಕತ್ವ ಯೋಜನೆಯಡಿ ಮಗುವನ್ನು ಪಡೆಯಲು ಅರ್ಹ ಪೋಷಕರಿಂದ ಅರ್ಜಿ ಆಹ್ವಾನಿಸಲಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಆಲ್ಕೋಳ, ಶಿವಮೊಗ್ಗಕ್ಕೆ ದೂರವಾಣಿ ಸಂಖ್ಯೆ:08182-295709 ಗೆ ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.