alex Certify ಖೇಲೋ ಇಂಡಿಯಾ ಯೋಜನೆ: ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಖೇಲೋ ಇಂಡಿಯಾ ಯೋಜನೆ: ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಜಿ ಆಹ್ವಾನ

ಮೈಸೂರು: ಭಾರತ ಸರ್ಕಾರವು ಖೇಲೋ ಇಂಡಿಯಾ ಯೋಜನೆಯಡಿ ರಾಜ್ಯ ಉತ್ಕೃಷ್ಟತಾ ಕೇಂದ್ರ(ಈಜು, ಅಥ್ಲೆಟಿಕ್ಸ್ ಮತ್ತು ಶೂಟಿಂಗ್) ಮತ್ತು ಜಯಪ್ರಕಾಶ ನಾರಾಯಣ ಯುವ ಕೇಂದ್ರ, ವಿದ್ಯಾನಗರ, ಬೆಂಗಳೂರು ಇಲ್ಲಿ ಮಂಜೂರು ಮಾಡಿದ್ದು, ಈ ಕೇಂದ್ರಕ್ಕೆ ಖೇಲೋ ಇಂಡಿಯಾ ನಿಯಮಗಳನುಸಾರ ಗುತ್ತಿಗೆ ಆಧಾರದ ಮೇಲೆ Young Professional and Sports Masseur ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಆಸಕ್ತಿ ಅಭ್ಯರ್ಥಿಗಳು ನಿಗಧಿತ ನಮೂನೆಯಲ್ಲಿ ವಿವರಗಳನ್ನು ಭರ್ತಿ ಮಾಡಿ ಸಂಬಂಧಿಸಿದ ದಾಖಲೆಗಳನ್ನು ನೋಟರಿ ಮಾಡಿಸಿ ಅರ್ಜಿಗಳನ್ನು 2021ರ ಡಿಸೆಂಬರ್ 16ರೊಳಗೆ ಕಛೇರಿಗೆ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಾಮುಂಡಿ ವಿಹಾರ ಕ್ರೀಡಾಂಗಣ, ನಜರ್‌ಬಾದ್, ಮೈಸೂರು ಇಲ್ಲಿನ ನೋಟಿಸ್ ಬೋರ್ಡ್ ಅಥವಾ ದೂರವಾಣಿ ಸಂಖ್ಯೆ: 0821-2564179 ನ್ನು ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...