ಶಿವಮೊಗ್ಗ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ವತಿಯಿಂದ 2021-22 ನೇ ಸಾಲಿನ ಸ್ವಯಂ ಉದ್ಯೋಗ ಕಾರ್ಯಕ್ರಮದಡಿ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮಶೀಲತಾಭಿವೃದ್ದಿ ಯೋಜನೆ. ಪ್ರೇರಣಾ (ಮೈಕ್ರೊ ಕ್ರೆಡಿಟ್ ಫೈನಾನ್ಸ್), ಭೂ ಒಡೆತನ ಯೋಜನೆ, ಸಮಗ್ರ ಗಂಗಾ ಕಲ್ಯಾಣ ಯೋಜನೆ ಪರಿಶಿಷ್ಟ ಪಂಗಡದ ಫಲಾಪೇಕ್ಷಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಆ. 25 ರಿಂದ ಆ. 31 ರವರೆಗೆ ವಿಸ್ತರಿಸಲಾಗಿದೆ.
ಅರಣ್ಯ ಆಧಾರಿತ ಆದಿವಾಸಿ ಮತ್ತು ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯದವರು ಬಹುತೇಕ ಗುಡ್ಡಗಾಡು ಪ್ರದೇಶಗಳಲ್ಲಿ ಹಾಗೂ ನಗರ ಪ್ರದೇಶದ ಹೊರಗೆ ವಾಸ ಮಾಡುತ್ತಿರುವವರು ಆನ್‍ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಲು ಕಷ್ಟಸಾಧ್ಯವಾಗುತ್ತಿರುವುದನ್ನು ಪರಿಗಣಿಸಿ ಆಫ್‍ಲೈನ್ ಮೂಲಕವೂ ಸಹ ಅರ್ಜಿ ಸಲ್ಲಿಸಬಹುದಾಗಿದ್ದು, ದಿ:09/09/2021 ಅಂತಿಮ ದಿನವಾಗಿದೆ ಎಂದು ಜಿಲ್ಲಾ ವ್ಯವಸ್ಥಾಪಕರು ತಿಳಿಸಿರುತ್ತಾರೆ.
ಫಲಾಪೇಕ್ಷಿಗಳು ಆನ್‍ಲೈನ್ ಮೂಲಕ ಅರ್ಜಿಗಳನ್ನು ಮತ್ತು ದಾಖಲೆಗಳನ್ನು ನಿಗಮದ ವೆಬ್‍ಸೈಟ್ https://kmvstdcl.karnataka.gov.in ಮೂಲಕ ಅಪ್‍ಲೋಡ್ ಮಾಡಬಹುದು. ಹೆಚ್ಚಿನ ಮಾಹಿತಿಗೆ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ಅಥವಾ ದೂ.ಸಂ.: 08182-276776 ನ್ನು ಸಂಪರ್ಕಿಸುವುದು.