ಆಶಾ – ಅಂಗನವಾಡಿ ಕಾರ್ಯಕರ್ತೆಯರಿಗೂ ‘ಗೃಹಲಕ್ಷ್ಮಿ’ ಯೋಜನೆ ಅನ್ವಯ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ

ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಕಾಂಗ್ರೆಸ್, ತಾನು ನೀಡಿದ್ದ ಭರವಸೆಯಂತೆಯೇ ರಾಜ್ಯದಲ್ಲಿ ಅಧಿಕಾರ ಸ್ವೀಕರಿಸಿದ ಬಳಿಕ ಒಂದೊಂದೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ‘ಶಕ್ತಿ’ ಯೋಜನೆಯನ್ನು ಈಗಾಗಲೇ ಕೋಟ್ಯಾಂತರ ಮಂದಿ ಬಳಕೆ ಮಾಡಿಕೊಂಡಿದ್ದಾರೆ.

200 ಯೂನಿಟ್ ವರೆಗೆ ಉಚಿತ ವಿದ್ಯುತ್ ಒದಗಿಸುವ ‘ಗೃಹಜ್ಯೋತಿ’ ಯೋಜನೆಗೂ ಭರ್ಜರಿ ಸ್ಪಂದನೆ ಸಿಕ್ಕಿದ್ದು, ಇನ್ನು ಮಹಿಳೆಯರಿಗೆ ನಗದು ಪಾವತಿಸುವ ‘ಗೃಹಲಕ್ಷ್ಮಿ’ ಯೋಜನೆ ಜಾರಿಗೊಳಿಸಲು ಸಿದ್ಧತೆ ನಡೆಯುತ್ತಿದೆ. ಈ ಯೋಜನೆ ಅಡಿ ಮನೆಯ ಯಜಮಾನಿ ಖಾತೆಗೆ ನೇರವಾಗಿ 2,000 ರೂಪಾಯಿಗಳನ್ನು ಪಾವತಿಸಲಾಗುತ್ತದೆ.

ಈ ಯೋಜನೆ ಆಶಾ – ಅಂಗನವಾಡಿ ಕಾರ್ಯಕರ್ತೆಯರಿಗೆ ಅನ್ವಯವಾಗುತ್ತದೋ ಇಲ್ಲವೋ ಎಂಬ ಗೊಂದಲವಿದ್ದು, ಇದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತೆರೆ ಎಳೆದಿದ್ದಾರೆ. ಸೋಮವಾರದಂದು ಚಾಮರಾಜನಗರದಲ್ಲಿ ಗೃಹಲಕ್ಷ್ಮಿ ಯೋಜನೆ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಅಂಗನವಾಡಿ – ಆಶಾ ಕಾರ್ಯಕರ್ತೆಯರಿಗೂ ಗೃಹಲಕ್ಷ್ಮಿ ಯೋಜನೆ ಅನ್ವಯವಾಗುತ್ತದೆ. ಅಲ್ಲದೆ ಯೋಜನೆಗೆ ನೋಂದಣಿ ಮಾಡಲು ಯಾವುದೇ ಗಡುವು ನಿಗದಿಪಡಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read