alex Certify ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಡಿ. 31 ರವೆರೆಗೆ ವಿಸ್ತರಿಸಲಾಗಿದೆ.

ಅಲ್ಪಸಂಖ್ಯಾತರ ವರ್ಗ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ವಿದ್ಯಾರ್ಥಿಗಳಿಗೆ ಶೇ. 50 ರಷ್ಟು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರೀ ಮೆಟ್ರಿಕ್, ಪೋಸ್ಟ್ ಮೆಟ್ರಿಕ್ ಮತ್ತು ಮೆರಿಟ್ ಕಂ ಮೀನ್ಸ್ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಿದ್ದು, 2020-21ನೇ ಸಾಲಿನಲ್ಲಿ ಪ್ರಿ ಮೆಟ್ರಿಕ್ 1ನೇ ತರಗತಿ ಯಿಂದ 10ನೇ ತರಗತಿ ಮತ್ತು ಮೆಟ್ರಿಕ್ ನಂತರದ ಹಾಗೂ ಟೆಕ್ನಿಕಲ್ ಮತ್ತು ಪ್ರೊಫೆಷನಲ್ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ಡಿ. 31 ರವರೆಗೆ ವಿಸ್ತರಿಸಲಾಗಿದೆ.

ಅರ್ಜಿಯನ್ನು ಡಿ. 31 ರೊಳಗಾಗಿ ಆನ್ ಲೈನ್ ವೆಬ್‍ಸೈಟ್ www.scholarships.gov.in ನಲ್ಲಿ ಅರ್ಜಿ ಸಲ್ಲಿಸಿದ ನಂತರ, ಪ್ರಿ ಮೆಟ್ರಿಕ್ ವಿದ್ಯಾರ್ಥಿಗಳು ಅರ್ಜಿಯನ್ನು ಧೃಢೀಕೃತ ದಾಖಲಾತಿಗಳೊಂದಿಗೆ ಶಾಲೆಗೆ ಸಲ್ಲಿಸಬೇಕು. ಮತ್ತು ಪೋಸ್ಟ್ ಮೆಟ್ರಿಕ್ ಮತ್ತು ಮೆರಿಟ್ ಕಂ ಮೀನ್ಸ್ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಕಾಲೇಜಿಗೆ ಒಂದು ಸೆಟ್ ಮತ್ತು ಸಂಬಂಧಪಟ್ಟ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರದಲ್ಲಿ ಸಲ್ಲಿಸಬೇಕು.

ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಲು ಇಲಾಖೆ ವೆಬ್ ಸೈಟ್:  www.dom.karnataka.gov.in ನಲ್ಲಿ ಪರಿಶೀಲಿಸಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಜಿಲ್ಲಾ ಮಾಹಿತಿ ಕೇಂದ್ರ 08192-250066/ 250022. ಹರಿಹರ-9845329483, ಜಗಳೂರು-9880392344, ಚನ್ನಗಿರಿ-7411270434, ಹೊನ್ನಾಳಿ-9739888820 ಇವರನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...