
ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಶುಲ್ಕ ಮರುಪಾವತಿ ಕಾರ್ಯಕ್ರಮ ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಸೌಲಭ್ಯ ನೀಡಲು ಆನ್‌ಲೈನ್ ಮೂಲಕ ಕರೆಯಲಾಗಿದ್ದ ಅರ್ಜಿ ಸಲ್ಲಿಕೆ ಅವಧಿಯನ್ನು ಡಿ.20 ರವರೆಗೆ ವಿಸ್ತರಿಸಲಾಗಿದೆ.
ಮೆಟ್ರಿಕ್ ನಂತರದ ಕೋರ್ಸುಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಹಾಗೂ ವೃತ್ತಪರ ಸ್ನಾತಕೋತ್ತರ ಪದವಿಗಳಿಗೆ ಹಾಗೂ ಪಿಯುಸಿ ಸಮಾನಾಂತರ(ಪಿಯು & ಸಮಾನಂತರ ಕೋರ್ಸ್ಗಳು) ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸ್ಗಳಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಹಾಗೂ ಪ್ರವರ್ಗ-1ರ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ ಸೌಲಭ್ಯಕ್ಕಾಗಿ https://ssp.postmartic.karnataka.gov.in ವೆಬ್‌ಸೈಟ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ನ.30 ವರೆಗೆ ನಿಗದಿಪಡಿಸಲಾಗಿತ್ತು. ಇದೀಗ ಈ ಅವಧಿಯನ್ನು ಡಿಸೆಂಬರ್ 20 ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿ ಹಾಗೂ ಕಾರ್ಯಕ್ರಮಗಳ ವಿವರ ಅರ್ಹತೆ ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ www.bcwd.karnataka.gov.in, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್ postmatrichelp@karnataka.gov.in, ದೂ.ಸಂ.: 1902, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ದೂ.ಸಂ.: 08182-222129 ಅಥವಾ ಸಹಾಯವಾಣಿ 8050770005 ಗಳನ್ನು ಸಂಪರ್ಕಿಸಬಹುದೆಂದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಇಲಾಖೆಯ ಶಿವಮೊಗ್ಗ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.