ರಾಮನಗರ: ರಾಮನಗರ ಜಿಲ್ಲೆಯ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿಗಳಿಗೆ ಅರೆಕಾಲಿಕ ಕಾನೂನು ಸ್ವಯಂಸೇವಕರ ನೇಮಕತಿ ಮಾಡಿಕೊಳ್ಳಲಾಗುವುದು. 175 ಹುದ್ದೆಗಳ ಭರ್ತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ಹಾಗೂ ಆಯಾ ತಾಲೂಕುಗಳಿಂದ ಗೌರವಧನದ ಮೇರೆಗೆ ನೇಮಕಾತಿಗೆ ಆಸಕ್ತ ಅಭ್ಯರ್ಥಿಗಳಿಂದ ವರ್ಗೀಕರಣದ ಅನ್ವಯ ನಿಗದಿತ ನಮೂನೆಯಲ್ಲಿ ಇಚ್ಛೆಯ ಪತ್ರವನ್ನು ಒಳಗೊಂಡಂತೆ ಅರ್ಜಿ ಆಹ್ವಾನಿಸಲಾಗಿದೆ.
ರಾಮನಗರ 100, ಚನ್ನಪಟ್ಟಣ 25, ಕನಕಪುರ 25, ಮಾಗಡಿ 25 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಕನಿಷ್ಠ ಪಕ್ಷ ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿರಬೇಕು. ಯಾವುದೇ ಕ್ರಿಮಿನಲ್ ಅಪರಾಧದ ಹಿನ್ನೆಲೆಯುಳ್ಳವರಾಗಿರಬಾರದು. ನಿವೃತ್ತ ಶಿಕ್ಷಕರು ಸೇರಿದಂತೆ ಶಿಕ್ಷಕರು, ನಿವೃತ್ತ ಸರ್ಕಾರಿ ನೌಕರರು, ಹಿರಿಯ ನಾಗರಿಕರು, ಎಂ.ಎಸ್.ಡಬ್ಲ್ಯೂ. ವಿದ್ಯಾರ್ಥಿಗಳು, ಉಪನ್ಯಾಸಕರು, ಅಂಗನವಾಡಿ ಕಾರ್ಯಕರ್ತೆಯರು, ವೈದ್ಯರು, ವಿದ್ಯಾರ್ಥಿಗಳು, ಕಾನೂನು ವಿದ್ಯಾರ್ಥಿಗಳು, ರಾಜಕೀಯವಲ್ಲದ ಸಂಘಗಳು, ಮಹಿಳಾ ಸ್ವಸಹಾಯ ಸಂಘಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅರೆಕಾಲಿಕ ಕಾನೂನು ಸ್ವಯಂಸೇವಕರೆಂದು ನಿರ್ಧರಿಸುವ ಇತರೆ ಯಾವುದೇ ವ್ಯಕ್ತಿಗಳು ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ತಾತ್ಕಾಲಿಕವಾಗಿದ್ದು, ಗೌರವ ಧನದ ಆಧಾರದ ಮೇಲೆ ಮೂರು ವರ್ಷದ ಅವಧಿಗೆ ನಿಯೋಜಿಸಲಾಗುತ್ತದೆ, ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನವಾಗಿದೆ, ರಾಮನಗರ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್ಸೈಟ್ https://ramanagara.dcourts.gov.in ಗಮನಿಸಬಹುದಾಗಿದೆ,