alex Certify ಮಹಿಳೆಯರು, ವಿದ್ಯಾರ್ಥಿಗಳು, ಯುವಕರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳೆಯರು, ವಿದ್ಯಾರ್ಥಿಗಳು, ಯುವಕರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಮೈಸೂರು: ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2021-22ನೇ ಸಾಲಿನಲ್ಲಿ ವಿವಿಧ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಿದೆ.

ಅರಿವು ಶೈಕ್ಷಣಿಕ ಸಾಲ ಯೋಜನೆ ನವೀಕರಣ ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಈಗಾಗಲೇ ಕಳೆದ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿಯಲ್ಲಿ ಸೌಲಭ್ಯ ಪಡೆದ ವಿದ್ಯಾರ್ಥಿಗಳಿಗೆ 2021-22ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ 2ನೇ ಕಂತಿಗೆ ಸುವಿಧಾ ತಂತ್ರಾಂಶದಲ್ಲಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು  https://suvidha.karnataka.gov.in ಜಾಲತಾಣದೊಂದಿಗೆ ಅರ್ಜಿ ಸಲ್ಲಿಸಬಹುದು.

ಸ್ವಯಂ ಉದ್ಯೋಗ ಸಾಲ ಯೋಜನೆಯಡಿ ಸ್ವಯಂ ಉದ್ಯೋಗಕ್ಕೆ ವ್ಯಾಪಾರ, ಕೈಗಾರಿಕೆ, ಸಾರಿಗೆ ಮತ್ತು ಸೇವಾವಲಯ ಮುಂತಾದ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಠ 2.00 ಲಕ್ಷ ರೂ. ಗಳವರೆಗೆ ಆರ್ಥಿಕ ನೆರವು, ಇದರಲ್ಲಿ ಗರಿಷ್ಠ ಶೇ.15 ರಷ್ಟು ಸಹಾಯಧನ, ಉಳಿಕೆ ಮೊತ್ತ ವಾರ್ಷಿಕ ಶೇ.4ರ ಬಡ್ಡಿದರಲ್ಲಿ ಸಾಲ ದೊರಕುವುದು.

ಗಂಗಾ ಕಲ್ಯಾಣ ಯೋಜನೆಯಡಿ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಕ್ಕೆ ಸೇರಿದ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ಒಂದು ಕೊಳವೆ ಬಾವಿ ಕೊರೆಯಿಸಿ, ಪಂಪ್ಸೆಟ್ ಉಪಕರಣಗಳನ್ನು ಸರಬರಾಜು ಮಾಡಿ ವಿದ್ಯುತ್ ಸಂಪರ್ಕ ಕಲ್ಪಿಸಿ ನೀರಾವರಿ ಸೌಲಭ್ಯ ಒದಗಿಸಲಾಗುವುದು.

ಘಟಕ ವೆಚ್ಚ 2.50 ಲಕ್ಷ ರೂ. ಗಳಲ್ಲಿ 2.00 ಲಕ್ಷ ರೂ. ಗಳ ಸಹಾಯಧನ ಹಾಗೂ 50,000 ರೂ. ಶೇ.4ರ ಬಡ್ಡಿದರದಲ್ಲಿ ಸಾಲ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಘಟಕವೆಚ್ಚ 4.00 ಲಕ್ಷ ರೂ. ಗಳು. ಈ ಮೊತ್ತದಲ್ಲಿ ವಿದ್ಯುದ್ದೀಕರಣಕ್ಕೆ ಪ್ರತಿ ಕೊಳವೆ ಬಾವಿಗೆ 50,000 ರೂ. ಗಳನ್ನು ವಿದ್ಯುತ್ ಸರಬರಾಜು ಕಂಪನಿಗೆ ಪಾವತಿಸಲಾಗುವುದು.

ತೆರೆದ ಬಾವಿ ನೀರಾವರಿ ಯೋಜನೆಯಡಿ ವೈಯಕ್ತಿಕ ನೀರಾವರಿ ಕೊಳವೆ ಬಾವಿ ಯೋಜನೆಗೆ ನಿಗಧಿಪಡಿಸಿದ ಘಟಕ ವೆಚ್ಚದಲ್ಲಿ ಕರಾವಳಿ ಹಾಗೂ ಮಲೆನಾಡು ಪ್ರದೇಶದ ಜಿಲ್ಲೆಗಳಲ್ಲಿ ತೆರೆದ ಬಾವಿ ನೀರಾವರಿ ಸೌಲಭ್ಯ ಒದಗಿಸಲು ಅವಕಾಶವಿರುತ್ತದೆ.

ಬ್ಯಾಂಕ್ ಗಳ ಸಹಯೋಗದೊಂದಿಗೆ ಸಾಲ ಮತ್ತು ಸಹಾಯಧನ ಯೋಜನೆಯಡಿ ಅರ್ಜಿದಾರರು ಕೈಗೊಳ್ಳುವ ವ್ಯಾಪಾರ, ಕೃಷಿ ಮತ್ತು ಕೃಷಿ ಅವಲಂಭಿತ ಚಟುವಟಿಕೆಗಳು, ಸೇವಾ ಉದ್ದಿಮೆಗಳು, ತಾಂತ್ರಿಕ ಉದ್ದಿಮೆಗಳು ಮತ್ತು ಸಾರಿಗೆ ವಲಯದಲ್ಲಿ ಕೈಗೊಳ್ಳುವ ಆರ್ಥಿಕ ಚಟುವಟಿಕೆಯನುಸಾರ ಗರಿಷ್ಠ 10 ಲಕ್ಷ ರೂ.ಗಳವರೆಗೆ ಬ್ಯಾಂಕ್ ಗಳಿಂದ ಸಾಲ ಪಡೆಯುವುದು. ಬ್ಯಾಂಕ್ ಗಳು ಮಂಜೂರು ಮಾಡುವ ಸಾಲದ ಮೊತ್ತದಲ್ಲಿ ಶೇ. 20 ರಷ್ಟು ಅಂದರೆ ಗರಿಷ್ಠ 1 ಲಕ್ಷ ರೂ.ಗಳನ್ನು ನಿಗಮದಿಂದ ಸಹಾಯಧನದ ಮೂಲಕ ಮಂಜೂರು ಮಾಡಲಾಗುವುದು.

ಸ್ವ-ಸಹಾಯ ಗುಂಪುಗಳ ಮೂಲಕ ಸಾಲ ಮತ್ತು ಸಹಾಯಧನ ಯೋಜನೆಯಡಿ ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯದ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸ್ವ ಸಹಾಯ ಗುಂಪುಗಳ ಮೂಲಕ ಕೈಗೊಳ್ಳುವ ಆರ್ಥಿಕ ಚಟುವಟಿಕೆಗಳಿಗೆ ರಿಯಾಯಿತಿ ಬಡ್ಡಿದರದಲ್ಲಿ ಸಾಲ ಹಾಗೂ ಸಹಾಯಧನವನ್ನು ಒದಗಿಸುವುದು. ಶೇ. 4 ರ ಬಡ್ಡಿದರದಲ್ಲಿ ಪ್ರತಿ ಸದಸ್ಯರಿಗೆ ಗರಿಷ್ಠ 15,000 ರೂ. ಸಾಲ ಮತ್ತು ಗರಿಷ್ಠ 5,000 ರೂ. ಸಹಾಯಧನ ಸೇರಿ ಪ್ರತಿ ಸದಸ್ಯರಿಗೆ ಗರಿಷ್ಠ 20,000 ರೂ. ಒಂದು ಸ್ವ ಸಹಾಯ ಗುಂಪಿಗೆ ಗರಿಷ್ಠ 3,00,000 ರೂ. ಗಳ ಸಾಲ ದೊರಕುವುದು.

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ 2022ರ ಜನವರಿ 10 ರೊಳಗೆ ಸಲ್ಲಿಸುವುದು. ಆನಂತರ ಬಂದAತಹ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ.

ಸೌಲಭ್ಯ ಪಡೆಯ ಬಯಸುವವರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ 98,000 ರೂ. ಮತ್ತು ಪಟ್ಟಣ ಪ್ರದೇಶದವರಿಗೆ 1,20,000 ರೂ. ಒಳಗಿರಬೇಕು ಮತ್ತು ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು. ಆಧಾರ್ ಕಾರ್ಡ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೋಂದಿರಬೇಕು, ಚಾಲ್ತಿಯಲ್ಲಿರುವ ಜಾತಿ ಆದಾಯ ಪ್ರಮಾಣ ಪತ್ರ ಲಗತ್ತಿಸಬೇಕು.

ಈ ಮೇಲ್ಕಂಡ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಕ್ಕೆ ಅರ್ಜಿದಾರರು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಮೈಸೂರು ಹಾಗೂ ನಿಗಮದ ವೆಬ್ಸೈಟ್  https://kaad.karnataka.gov.in  ಇಲ್ಲಿ ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ ಸಂಖ್ಯೆ:080-22374832 ಅಥವಾ ಜಿಲ್ಲಾ ಕಛೇರಿಯ ದೂರವಾಣಿ ಸಂಖ್ಯೆ: 0821-2341194 ಸಂಪರ್ಕಿಸಬಹುದು ಎಂದು ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...