alex Certify ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪ್ರೋತ್ಸಾಹಧನ ಮಂಜೂರಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪ್ರೋತ್ಸಾಹಧನ ಮಂಜೂರಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಧಾರವಾಡ: 2019-20ನೇ ಸಾಲಿನಲ್ಲಿ ನಡೆದ ಮೆಟ್ರಿಕ್ ನಂತರದ ವಿವಿಧ ಕೋರ್ಸುಗಳ ಪಬ್ಲಿಕ್ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರಾತಿಗಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 21 ರ ವರೆಗೆ ವಿಸ್ತರಿಸಲಾಗಿದೆ.

ವಿದ್ಯಾರ್ಥಿಗಳು ಈ ಕಾಲಾವಕಾಶದ ಸದುಪಯೋಗ ಪಡೆದುಕೊಂಡು, ಸಮಾಜ ಕಲ್ಯಾಣ ಇಲಾಖೆ ವೆಬ್ ಸೈಟ್ www.sw.kar.nic.in  ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಸಿದ ನಂತರ ಅರ್ಜಿಯ ಪ್ರತಿಯನ್ನು ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಜಂಟಿ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಡಿ.ಸಿ. ಕಾಂಪೌಂಡ್, ಧಾರವಾಡ ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಜಂಟಿ ನಿರ್ದೇಶಕರ ಕಚೇರಿ ಹಾಗೂ ಸಂಬಂಧಿಸಿದ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರುಗಳ ಕಚೇರಿ ಸಮಾಜ ಕಲ್ಯಾಣ ಇಲಾಖೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...