ಬೆಂಗಳೂರು :ಸಾರಿಗೆ ನೌಕರರ ಹಿತದೃಷ್ಟಿಯಿಂದ ಸಾಮಾನ್ಯ ಮತ್ತು ಪರಸ್ಪರ ವರ್ಗಾವಣೆಗೆ ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ:30-09-2023 ರ ಸಂಜೆ 5:30 ರವರೆಗೆ ವಿಸ್ತರಿಸಿ ಅವಕಾಶ ಕಲ್ಪಿಸಲಾಗಿರುತ್ತದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕರು ಸುತ್ತೋಲೆ ಹೊರಡಿಸಿದ್ದಾರೆ.
2023ನೇ ಸಾಲಿನ ವರ್ಗಾವಣೆ ಪ್ರಕ್ರಿಯೆ ದಿನಾಂಕ: 05-07-2023 ರ ಬೆಳಿಗ್ಗೆ 11:00 ಗಂಟೆಯಿಂದ ಪ್ರಾರಂಭವಾಗಿದ್ದು, ದಿನಾಂಕ:18-08-2023 ರ ಸಂಜೆ 5:30 ರವರೆಗೆ ಆನ್-ಲೈನ್ ಮೂಲಕ www.ksrtc.org/transfer ರಲ್ಲಿ ಸಾಮಾನ್ಯ ಮತ್ತು ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ.
ಪ್ರಸ್ತುತ, ನೌಕರರ ಹಿತದೃಷ್ಟಿಯಿಂದ ಸಾಮಾನ್ಯ ಮತ್ತು ಪರಸ್ಪರ ವರ್ಗಾವಣೆಗೆ ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ:30-09-2023 ರ ಸಂಜೆ 5:30 ರವರೆಗೆ ವಿಸ್ತರಿಸಿ ಅವಕಾಶ ಕಲ್ಪಿಸಲಾಗಿರುತ್ತದೆ. ನೌಕರರು ಸದರಿ ಸೌಲಭ್ಯದ ಸದುಪಯೋಗವನ್ನು ಪಡೆಯಲು ತಿಳಿಸಲಾಗಿದೆ. ಸದರಿ ವಿಷಯವನ್ನು ನೌಕರರ ಗಮನಕ್ಕೆ ತರಲು ಹಾಗೂ ಕೇಂದ್ರ ಕಛೇರಿ/ವಿಭಾಗ/ಘಟಕದ ತರಬೇತಿ ಕೇಂದ್ರ/ಕಾರ್ಯಾಗಾರಗಳ ಸೂಚನಾ ಫಲಕಗಳಲ್ಲಿ ಪ್ರದರ್ಶಿಸಲು ಕೋರಲಾಗಿದೆ ಎಂದು ಸುತ್ತೋಲೆ ಹೊರಡಿಸಿದ್ದಾರೆ.