alex Certify ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ʼಪ್ರಶಸ್ತಿʼ ನೀಡಲು ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ʼಪ್ರಶಸ್ತಿʼ ನೀಡಲು ಅರ್ಜಿ ಆಹ್ವಾನ

Award for Children of Exceptional Achievement: Call for Applications | ಅಸಾಧಾರಣ ಸಾಧನೆಗೈದ ಮಕ್ಕಳಿಗೆ ಪ್ರಶಸ್ತಿ: ಅರ್ಜಿ ಆಹ್ವಾನ | Karnataka News in Kannada

ಶಿವಮೊಗ್ಗ: ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳನ್ನು ಪ್ರೋತ್ಸಾಹಿಸಲು 2023-24 ನೇ ಸಾಲಿನ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ನಾವೀನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆಯನ್ನು ಮಾಡಿರುವಂತಹ 5 ರಿಂದ 8 ವರ್ಷದೊಳಗಿನ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಮಟ್ಟದ ಪ್ರಶಸ್ತಿಯು ರೂ.10,000 ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ.

2023-24 ನೇ ಸಾಲಿನ ಪ್ರಶಸ್ತಿಗಾಗಿ ನಿಗದಿಪಡಿಸಿರುವ ಅರ್ಜಿ ನಮೂನೆಗಳನ್ನು ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, 100 ಅಡಿ ರಸ್ತೆ, ಆಲ್ಕೋಳ, ಶಿವಮೊಗ್ಗ ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ದಿ: 15-09-2023 ರೊಳಗೆ ಈ ಕಚೇರಿಗೆ ಸಲ್ಲಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...