ಬಳ್ಳಾರಿ : ಮೀನುಗಾರಿಕೆ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ವಿವಿಧ ಯೋಜನೆಗಳಡಿ ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮೀನುಗಾರಿಕೆ ಉಪನಿರ್ದೇಶಕ ಶಿವಣ್ಣ ಅವರು ತಿಳಿಸಿದ್ದಾರೆ.
ಅರ್ಹ ಅರ್ಜಿದಾರರು ಅಗತ್ಯ ದಾಖಲೆಗಳೊಡನೆ ವೆಬ್ಸೈಟ್ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು ಅಥವಾ ಆಯಾ ತಾಲ್ಲೂಕಿನ ಮೀನುಗಾರಿಕೆ ಇಲಾಖೆ ಕಚೇರಿ ಮುಖಾಂತರ ಆನ್ಲೈನ್ನಲ್ಲಿಯೂ ಸಹ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸೆ.25 ಕೊನೆಯ ದಿನವಾಗಿದೆ.
*ಯೋಜನೆಗಳ ವಿವರ:
ಒಳನಾಡು ಮೀನುಗಾರಿಕೆ ಅಭಿವೃದ್ಧಿಗೆ ಸಹಾಯ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀನು ಕೃಷಿಕರಿಗೆ ರೂ.10 ಸಾವಿರ ವೆಚ್ಚದಲ್ಲಿ ಉಚಿತ ಮೀನುಗಾರಿಕೆ ಸಲಕರಣೆ ಕಿಟ್ಗಳನ್ನು ವಿತರಿಸಲಾಗುವುದು.
ಮೀನು ಮಾರುಕಟ್ಟೆಗಳ ನಿರ್ಮಾಣ ಮತ್ತು ಮೀನು ಮಾರಾಟಕ್ಕೆ ಸಹಾಯ ಮತ್ಸö್ಯವಾಹಿನಿ ಯೋಜನೆಯಡಿ ಐಸ್ಬಾಕ್ಸ್ನೊಂದಿಗೆ ಮೊಪೆಡ್ ಮತ್ತು ಸೈಕಲ್ ಖರೀದಿಸಲು ಸಹಾಯಧನ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ, ಸಂಡೂರು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಮೀನುಗಾರಿಕೆ ಉಪನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.