ಕೋಲಾರ: ಪ್ರಸಕ್ತ ಸಾಲಿನ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಉಚಿತವಾಗಿ ಲ್ಯಾಪ್ ಟಾಪ್ ನೀಡಲು ಕಾರ್ಮಿಕ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳ ಪೈಕಿ 2023-24ನೇ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟ್ಯಾಪ್ ಗಳನ್ನು ನೀಡಲಾಗುವುದು.
ಕೋಲಾರ ಜಿಲ್ಲಾ ಕಾರ್ಯ ವ್ಯಾಪ್ತಿಯಲ್ಲಿ ನೋಂದಣಿಯಾಗಿರುವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳು ಸೌಲಭ್ಯ ಪಡೆಯಬಹುದು.
ಅರ್ಜಿ ನಮೂನೆಯನ್ನು ಆಯಾ ತಾಲ್ಲೂಕಿನ ಕಾರ್ಮಿಕ ನಿರೀಕ್ಷಕ ಕಛೇರಿಯಲ್ಲಿ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಸೆಪ್ಟೆಂಬರ್ 20 ಸಂಜೆ 5.00 ಗಂಟೆಯೊಳಗಾಗಿ ಸಲ್ಲಿಸಬೇಕು. ನಂತರ ಬರುವ ಅರ್ಜಿಗಳನ್ನ ಸ್ವೀಕರಿಸುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ನಿರೀಕ್ಷಕರ ಕಛೇರಿ, ಕೋಲಾರ, ಮುಳಬಾಗಿಲು, ಮಾಲೂರು, ಬಂಗಾರಪೇಟೆ ಮತ್ತು ಕೆ.ಜಿ.ಎಫ್ ರವರ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಮತಿ ಶಬಾನಾ ಅಜ್ಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.