alex Certify ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಹುದ್ದೆ ಭರ್ತಿ ಮಾಡಿಕೊಳ್ಳಲು ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಿದೆ.
2021-22ನೇ ಸಾಲಿಗೆ ಅತಿಥಿ ಉಪನ್ಯಾಸಕರ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಜ. 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಈ ಕುರಿತು ರಾಜ್ಯ ಕಾಲೇಜು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಕಳೆದ ಒಂದು ತಿಂಗಳಿನಿಂದ ತರಗತಿಗಳನ್ನು ಬಹಿಷ್ಕರಿಸಿ ಹೋರಾಟ ನಡೆಸುತ್ತಿದ್ದರು. ಹೋರಾಟದ ನಂತರ ಎಚ್ಚೆತ್ತ ಸರ್ಕಾರವು ಉಪನ್ಯಾಸಕರಿಗೆ ಹಲವು ಸೌಲಭ್ಯಗಳನ್ನು ಒದಗಿಸಲು ಮುಂದಾಗಿತ್ತು.

ಇತ್ತೀಚೆಗಷ್ಟೇ ಅತಿಥಿ ಉಪನ್ಯಾಸಕರು ಹಲವು ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ಕೈಗೊಂಡಿದ್ದರು. ಈ ಸಂದರ್ಭದಲ್ಲಿ ಸೂಕ್ತ ಪ್ರತಿಕ್ರಿಯೆ ನೀಡಿದ್ದ ಸರ್ಕಾರ, ವೇತನ ಹೆಚ್ಚಿಸಿ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲಿಯೇ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆ ಭರ್ತಿ ಮಾಡಿಕೊಳ್ಳುವುದಾಗಿ ಹೇಳಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...