alex Certify ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ

ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ 2024-25ನೇ ಸಾಲಿನ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣಾ ಕಾರ್ಯಕ್ರಮದಡಿ ದನ, ಎಮ್ಮೆ, ಕುರಿ, ಮೇಕೆ, ಹಂದಿ ಹಾಗೂ ಕೋಳಿ ಸಾಕಾಣಿಕೆ ನಿರ್ವಹಣೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಪಡೆಯಲು ಆಸಕ್ತಿ ಹೊಂದಿರುವ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಕಾರ್ಯಕ್ರಮದಡಿ ಸಾಲ ಸೌಲಭ್ಯವು 2024 ಸೆಪ್ಟಂಬರ್ 15 ರಿಂದ 2025 ಮಾರ್ಚ್ 31 ರವರಗೆ ಮುಂದುವರೆಸಲಾಗುವುದು. ಆಸಕ್ತ ರೈತರು ತಮ್ಮ ಹತ್ತಿರದ ಪಶು ವೈದ್ಯಕೀಯ ಸಂಸ್ಥೆಗಳಿAದ ಅರ್ಜಿಗಳನ್ನು ಪಡೆದು ಭರ್ತಿಮಾಡಿ ಸಲ್ಲಿಸಲು ಸೂಚಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ-9482943111, ಚಳ್ಳಕೆರೆ-9448816499, ಹೊಳಲ್ಕೆರೆ- 9972965479, ಹೊಸದುರ್ಗ- 9945298407, ಹಿರಿಯೂರು-9483451044, ಮೊಳಕಾಲ್ಮೂರು- 9900964820 ಗೆ ಸಂಪರ್ಕಿಸಬಹುದು ಎಂದು ಚಿತ್ರದುರ್ಗ ಪಶು ಪಾಲನಾ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...