ಮಡಿಕೇರಿ: ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಆಯ್ಕೆ ಸಮಿತಿ ಸಭೆಯಲ್ಲಿ ಕೊಡಗು ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಖಾಲಿ ಇರುವ 10 ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳನ್ನು ರೋಸ್ಟರ್ ಬಿಂದುವನ್ನು ಗುರುತಿಸಿ ನೇಮಕಾತಿ ಮಾಡಲು ತೀರ್ಮಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಕೊಡಗು ಜಿಲ್ಲೆಯ ವೆಬ್‍ಸೈಟ್ ನಲ್ಲಿ https://kodogu.nic.in ಆನ್‍ಲೈನ್ ಮೂಲಕ ಭರ್ತಿ ಮಾಡಿ ಅಗತ್ಯ ದೃಢೀಕರಿಸಿದ ದಾಖಲೆಗಳೊಂದಿಗೆ ಸಲ್ಲಿಸಬಹುದು.
ವಿರಾಜಪೇಟೆ ತಾಲ್ಲೂಕಿನ ಚೆಂಬೆಬೆಳ್ಳೂರು, ಪರಿಶಿಷ್ಟ ಜಾತಿ, ಸಾಮಾನ್ಯ, ಚೆನ್ನಯ್ಯನಕೋಟೆ, ಸಾಮಾನ್ಯ, ಪೊನ್ನಂಪೇಟೆ ತಾಲ್ಲೂಕಿನ ಬಾಳೆಲೆ, ಪರಿಶಿಷ್ಟ ಪಂಗಡ, ಸಾಮಾನ್ಯ, ಕುಟ್ಟ, ಸಾಮಾನ್ಯ, ಮಹಿಳಾ ಅಭ್ಯರ್ಥಿ, ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ, ಪ್ರವರ್ಗ-1, ಸಾಮಾನ್ಯ, ಸೋಮವಾರಪೇಟೆ ತಾಲ್ಲೂಕಿನ ನಿಡ್ತ, ಸಾಮಾನ್ಯ, ಗ್ರಾ.ಅ., ಕುಶಾಲನಗರ ತಾಲ್ಲೂಕಿನ ಶಿರಂಗಾಲ, ಪ್ರವರ್ಗ-2(ಎ), ಸಾಮಾನ್ಯ, ಪೊನ್ನಂಪೇಟೆ ತಾಲ್ಲೂಕಿನ ಗೋಣಿಕೊಪ್ಪ ಸಾಮಾನ್ಯ, ಅಂ.ವಿ., ವಿರಾಜಪೇಟೆ ತಾಲ್ಲೂಕಿನ ಅರ್ಜಿ ಪರಿಶಿಷ್ಟ ಜಾತಿ, ಮಹಿಳಾ ಅಭ್ಯರ್ಥಿ ಹಾಗೂ ಪೊನ್ನಂಪೇಟೆ ತಾಲ್ಲೂಕಿನ ಕೆ.ಬಾಡಗ, ಸಾಮನ್ಯ, ಮಹಿಳಾ ಅಭ್ಯರ್ಥಿ,
ಹೆಚ್ಚಿನ ಮಾಹಿತಿಗೆ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿಗಳನ್ನು ಸಂಪರ್ಕಿಸಬಹುದು ಎಂದು ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ತಿಳಿಸಿದ್ದಾರೆ.