alex Certify ಅತಿಥಿ ಉಪನ್ಯಾಸಕರ ಹುದ್ದೆಗಳ ನೇಮಕಾತಿಗೆ ಅರ್ಜಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅತಿಥಿ ಉಪನ್ಯಾಸಕರ ಹುದ್ದೆಗಳ ನೇಮಕಾತಿಗೆ ಅರ್ಜಿ

ಬಳ್ಳಾರಿ: ಬಳ್ಳಾರಿಯ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ಪ್ರಸ್ತಕ ಶೈಕ್ಷಣಿಕ ಸಾಲಿನ 1, 3 ಮತ್ತು 5 ನೇ ಸೆಮಿಸ್ಟರ್‌ ಗೆ ಉಳಿಕೆಯಾಗಿರುವ ಕೋರ್ಸ್ ಗಳಿಗೆ ಅತಿಥಿ ಉಪನ್ಯಾಸಕರ ನೇಮಕಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆನ್‌ಲೈನ್ ಮೂಲಕ ಆಯ್ಕೆ ಮಾಡಲಾಗುತ್ತಿದ್ದು, ಎಐಸಿಟಿಇ ನಿಯಮಗಳನ್ವಯ ಕನಿಷ್ಠ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳು ಸೂಕ್ತ ದಾಖಲೆಗಳೊಂದಿಗೆ ಸೆ.6 ರೊಳಗಾಗಿ ಸಂಸ್ಥೆಯಲ್ಲಿ ಅರ್ಜಿ ಸಲ್ಲಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ:

ಆಟೋ ಮೊಬೈಲ್ ವಿಭಾಗ-06, ಸಿವಿಲ್ ವಿಭಾಗ-01, ಎಲೆಕ್ಟಿçಕಲ್ ವಿಭಾಗ-02, ಮೆಟಲರ್ಜಿ-06, ವಿಜ್ಞಾನ-02, ಇಂಗ್ಲೀಷ್-01 ಮತ್ತು ಕನ್ನಡ-01 ಸೇರಿ ಒಟ್ಟು 19 ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂ.08392-242228 ಗೆ ಸಂಪರ್ಕಿಸಬಹುದು ಎಂದು ಸರ್ಕಾರಿ ಪಾಲಿಟೆಕ್ನಿಕ್‌ನ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...