
ಕೃಷಿ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ಕೃಷಿ ಯಾಂತ್ರೀಕರಣ, ಕೃಷಿ ಸಂಸ್ಕರಣ, ತುಂತುರು ನೀರಾವರಿ ಘಟಕಗಳಿಗೆ ಬಳ್ಳಾರಿ ಹಾಗೂ ಕುರುಗೋಡು ತಾಲ್ಲೂಕು ವ್ಯಾಪ್ತಿಯ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೃಷಿ ಯಾಂತ್ರೀಕರಣ, ಕೃಷಿ ಸಂಸ್ಕರಣ ಯೋಜನೆಯಡಿ ಸಾಮಾನ್ಯ ವರ್ಗದ ರೈತರಿಗೆ ಶೇ.50 ರವರೆಗೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ರೈತರಿಗೆ ಶೇ.90 ವರೆಗೆ ಸಹಾಯಧನ ನೀಡಲಾಗುತ್ತದೆ.
ಸೂಕ್ಷ್ಮ ನೀರಾವರಿ ಯೋಜನೆಯಡಿ ತುಂತುರು ನೀರಾವರಿ ಘಟಕಗಳಿಗೆ ಎಲ್ಲಾ ವರ್ಗದ ರೈತರಿಗೆ ಶೇ.90 ರಷ್ಟು ಸಹಾಯಧನ ಒದಗಿಸಲಾಗುತ್ತದೆ.
ಆಸಕ್ತ ರೈತರು ಅರ್ಜಿಗಳನ್ನು ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರಗಳಲ್ಲಿ ಸಲ್ಲಿಸಿ ನೋಂದಾಯಿಸಿಕೊಳ್ಳಬಹುದು.
ರೈತರಿಂದ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳು ಸ್ವೀಕೃತವಾದಲ್ಲಿ ನಿಯಮಾನುಸಾರ ಜೇಷ್ಠತೆ ಅನ್ವಯ ಅರ್ಜಿಗಳನ್ನು ಪರಿಗಣಿಸಲಾಗುವುದು. ರೈತರು ಮೇಲ್ಕಂಡ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಬಳ್ಳಾರಿ ಸಹಾಯಕ ಕೃಷಿ ನಿರ್ದೇಶಕ ದಯಾನಂದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.