alex Certify ರೈತ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ : ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ : ಇಲ್ಲಿದೆ ಮಾಹಿತಿ

ತೋಟಗಾರಿಕೆ ಇಲಾಖೆ ಅಧೀನದ ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ ರೈತ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಯು ಮೇ 2 ರಿಂದ ಆರಂಭವಾಗಲಿದೆ. ತೋಟಗಾರಿಕೆ ತರಬೇತಿ ಕೇಂದ್ರ, ಸೋಮನಹಳ್ಳಿ ಕಾವಲ್, ಹಾಸನ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗುತ್ತದೆ. ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 

ಅರ್ಜಿಗಳನ್ನು ಈ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಏಪ್ರಿಲ್ 1 ರ ಸಂಜೆ 5 ಗಂಟೆ ಯೊಳಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಈ ಕಚೇರಿ ಬೆಳಗ್ಗೆ 10 ರಿಂದ ಸಂಜೆ 5.30 ರೊಳಗೆ ಸಂಪರ್ಕಿಸಬಹುದಾಗಿದೆ ಅಥವಾ ಅಂತರ್ಜಾಲ https://horticulturedir.karnataka.gov.in ಇಲ್ಲಿ ಅರ್ಜಿ ಪಡೆಯಬಹುದಾಗಿದೆ.

ಮೂಲ ಅಗತ್ಯ ದಾಖಲಾತಿಗಳೊಡನೆ (ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಛಾಪಾಕಾಗದ, ತಂದೆ/ತಾಯಿ/ಪೋಷಕರ ಹೆಸರಿನಲ್ಲಿರುವ ಜಮೀನಿನ ಆರ್‍ಟಿಸಿ, ಜಾತಿ ಪ್ರಮಾಣ ಪತ್ರ, ಫೋಟೋ, ತಂದೆ/ ತಾಯಿಯವರ ಒಪ್ಪಿಗೆ ಪತ್ರ) ಅರ್ಹ ಅಭ್ಯರ್ಥಿಗಳು ನಿಗಧಿತ ಸಮಯದೊಳಗೆ ಅರ್ಜಿಯನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ (ರಾಜ್ಯ ವಲಯ), ಮಡಿಕೇರಿಗೆ ಖುದ್ದು ಸಲ್ಲಿಸತಕ್ಕದ್ದು ಎಂದು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...