alex Certify ಗಮನಿಸಿ : ಪತ್ರಿಕೋದ್ಯಮ ಪದವೀಧರರಿಂದ 1 ವರ್ಷದ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ಪತ್ರಿಕೋದ್ಯಮ ಪದವೀಧರರಿಂದ 1 ವರ್ಷದ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2023-24 ನೇ ಸಾಲಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ 12 ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಂಡಿದೆ.

ಬೆಂಗಳೂರು ನಗರ ಜಿಲ್ಲಾ ಕಚೇರಿಯಲ್ಲಿ ಪರಿಶಿಷ್ಟ ಜಾತಿಯ ಇಬ್ಬರು ಅಭ್ಯರ್ಥಿಯನ್ನು ಹಾಗೂ ಪರಿಶಿಷ್ಟ ಪಂಗಡದ ಒಬ್ಬರನ್ನು ಮೆರಿಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಪ್ರತಿ ಅಪ್ರೆಂಟಿಸ್ ಗೆ ಮಾಹೆಯಾನ ರೂ 15,000ಗಳ ಸ್ಟೈಪೆಂಡ್ ನೀಡಲಾಗುವುದು. ಇಲಾಖೆಯ ಕ್ಷೇತ್ರ ಪ್ರಚಾರ ಕಾರ್ಯಗಳಲ್ಲಿ, ಸುದ್ದಿ ಸಂಗ್ರಹ, ರಚನೆ ಹಾಗೂ ವಿಶೇಷ ಲೇಖನ ರಚನೆಗಳಲ್ಲಿ ತರಬೇತಿ ನೀಡಲಾಗುವುದು. ಅಭ್ಯರ್ಥಿಗಳು ಪತ್ರಿಕೋದ್ಯಮದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿದ್ದು, ಕನ್ನಡ ಭಾಷಾ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು.

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದಂದು ಅಭ್ಯರ್ಥಿಗಳ ವಯಸ್ಸು 35 ವರ್ಷದೊಳಗಿರಬೇಕು. ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರಮಾಣ ಪತ್ರ, ಪಾಸ್ ಪೋರ್ಟ್ ಅಳತೆಯ ಎರಡು ಭಾವಚಿತ್ರ , ಕಂಪ್ಯೂಟರ್ ತರಬೇತಿ ಪ್ರಮಾಣ ಪತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು ದ್ವಿ-ಪ್ರತಿಯಲ್ಲಿ ಡಿಸೆಂಬರ್ 5 ರೊಳಗಾಗಿ ಉಪನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ವಾರ್ತಾ ಸೌಧ, 2ನೇ ಮಹಡಿ, ನಂ.17, ಭಗವಾನ್ ಮಹಾವೀರ್ ರಸ್ತೆ, ಬೆಂಗಳೂರು- 560001, ಇಲ್ಲಿಗೆ ಸಲ್ಲಿಸಬೇಕು. ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅರ್ಜಿ ಲಕೋಟೆಯ ಮೇಲೆ ಕಡ್ಡಾಯವಾಗಿ “ವಿಶೇಷ ಘಟಕ ಯೋಜನೆಯಡಿ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ನೀಡುವ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ” ಎಂದು ನಮೂದಿಸಬೇಕು.

ಅರ್ಹ ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೇಲೆ ತಿಳಿಸಿರುವ ಇಲಾಖೆ ಕಚೇರಿಯ ದೂರವಾಣಿ ಸಂಖ್ಯೆ: 080-22028059, ಇ-ಮೇಲ್ – urbaninformation2016@gmail.com ಹಾಗೂ ಮೊ.ಸಂ: 9480841219 ಅನ್ನು ಸಂರ್ಪಕಿಸಬಹುದಾಗಿದೆ ಎಂದು ಬೆಂಗಳೂರು ನಗರ ಜಿಲ್ಲೆಯ ಉಪನಿರ್ದೇಕರಾದ ಪಲ್ಲವಿ ಹೊನ್ನಾಪುರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...