![](https://kannadadunia.com/wp-content/uploads/2023/05/application-web-780x405-1-1.jpg)
ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಸಹಕಾರ ಕುರಿ ಮತ್ತು ಮೇಕೆಗಳ ಸಾಕಾಣಿಕೆದಾರರ ಸಂಘಗಳ ಮಹಾಮಂಡಳಗಳೊಂದಿಗೆ ಸಂಯೋಜನೆಗೊಂಡಿರುವ ಒಟ್ಟು ಏಳು ಸಂಘಗಳ ಸದಸ್ಯರುಗಳಲ್ಲಿ ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿಯಲ್ಲಿ (20+1) ಕುರಿ,ಮೇಕೆ ಸಾಕಾಣಿಕೆಗಾಗಿ ಸಾಲ ಮತ್ತು ಸಹಾಯಧನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಕುರಿಗಾಹಿಗಳು ಫೆಬ್ರವರಿ 19, 2024 ರೊಳಗಾಗಿ ಸಂಘದ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳ ಮೂಲಕ ನಿಗದಿತ ಅರ್ಜಿಯನ್ನು ದಾಖಲಾತಿಗಳೊಂದಿಗೆ ನಿಗಮದ ಕಛೇರಿಗೆ ಸಲ್ಲಿಸಬೇಕು. ಈ ಯೋಜನೆಯು ಸಂಘದ ಸದಸ್ಯರಿಗೆ ಮಾತ್ರ ಸೀಮಿತಗೊಂಡಿರುತ್ತದೆ ಎಂದು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.