ಧಾರವಾಡ : ಧಾರವಾಡ ಜಿಲ್ಲೆಯಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಹೊಸದಾಗಿ ಖಾಸಗಿ ಶಾಶ್ವತ ಅನುದಾನರಹಿತ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಆನ್‍ಲೈನ್ ಅರ್ಜಿಯನ್ನು ವೆಬ್‍ಸೈಟ್ https̤://pue.karnataka.gov.in/ ಮೂಲಕ ನ.14,2023 ರಿಂದ ಮಾರ್ಚ್ 31, 2024 ರ ವರೆಗೆ https://dpue-pragathi.karnataka.gov.in/newcollege 2024 ಲಿಂಕ್ ಮೂಲಕ ಅವಕಾಶ ಕಲ್ಪಿಸಲಾಗಿದೆ.
ಆಸಕ್ತರು ಆನ್ ಲೈನ್ ಅರ್ಜಿ ಸಲ್ಲಿಸಿದ ನಂತರ ಒಂದು ಪ್ರತಿಯನ್ನು ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಕಾಲೇಜು ರಸ್ತೆ, ಆರ್.ಎನ್. ಶೆಟ್ಟಿ ಕ್ರೀಡಾಂಗಣ ಎದುರು ಧಾರವಾಡ ಇಲ್ಲಿಗೆ ಖುದ್ದಾಗಿ ಸಲ್ಲಿಸಬೇಕೆಂದು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.