ಬೆಂಗಳೂರು : ಪ್ರವಾಸೋದ್ಯಮ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ತರಬೇತಿ ಕಾರ್ಯಕ್ರಮಗಳು: ಫುಡ್ ಬೇವರೇಜ್ ಸರ್ವಿಸ್ ಸ್ಟೇವಾರ್ಡ (10ನೇ ತರಗತಿ ವಿದ್ಯಾರ್ಹತೆ), ರೂಮ್ ಅಟೇಂಡೆಟ್ (5ನೇ ತರಗತಿ ವಿದ್ಯಾರ್ಹತೆ), ಫ್ರಂಟ್ ಆಫೀಸ್ ಅಸೋಸಿಯೇಟ್ (12ನೇ ತರಗತಿ ವಿದ್ಯಾರ್ಹತೆ), ಮಲ್ಟಿ ಕ್ಯೂಸಿನ್ ಕುಕ್ (8ನೇ ತರಗತಿ ವಿದ್ಯಾರ್ಹತೆ) ತರಬೇತಿಗಾಗಿ 20 ರಿಂದ 45 ವರ್ಷದೊಳಗಿನ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತರು ಡಿಸೆಂಬರ್ 28 ರ ಒಳಗಾಗಿ ಅರ್ಜಿಗಳನ್ನು ಸಹಾಯಕ ನಿರ್ದೇಶಕರ ಕಛೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರವಾಸೋದ್ಯಮ ಇಲಾಖೆ, ಕೊಠಡಿ ಸಂ: 09, ನೆಲಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ ದೇವನಹಳ್ಳಿ ತಾಲ್ಲೂಕು ಇಲ್ಲಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂರವಾಣಿ ಸಂಖ್ಯೆ: 08022040633 ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.