ಧಾರವಾಡ : ದೀನ್’ದಯಾಳ ಅಂತ್ಯೋದಯ ಯೋಜನೆಯ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ಧಾರವಾಡ ಶಹರದ ಜಿಲ್ಲಾ ಆಸ್ಪತ್ರೆ ಆವರಣದ ಕಟ್ಟಡದಲ್ಲಿ ಕಿರು ಅಕ್ಕ ಕೆಫೆ ಯೋಜನೆ ಅನುಷ್ಠಾನಗೊಳಿಸಲು ಮತ್ತು ನಿರ್ವಹಿಸಲು ಧಾರವಾಡ ಶಹರದ ಸ್ವ-ಸಹಾಯ ಗುಂಪುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ತಾಂತ್ರಿಕ ಮತ್ತು ಆರ್ಥಿಕ ದಾಖಲೆಗಳ ಮತ್ತು ಸೂಕ್ತ ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಮುದಾಯ ಸಂಘಟನಾಧಿಕಾರಿಗಳು ವಲಯ ಕಚೇರಿ ನಂ-01 ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಧಾರವಾಡ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೂನೆಗಾಗಿ ಸಮುದಾಯ ಸಂಘಟನಾಧಿಕಾರಿಗಳು ವಲಯ ಕಚೇರಿ ನಂ-01 ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಧಾರವಾಡ (ಮೊ-9632612668) ಸಂಪರ್ಕಿಸಬಹುದು ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.