ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಕಾನೂನು ಪದವಿಯಲ್ಲಿ ಉತ್ತೀರ್ಣರಾದ ಅಲ್ಸಸಂಖ್ಯಾತರ ವರ್ಗಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ದ, ಪಾರ್ಸಿ ಅಭ್ಯರ್ಥಿಗಳಿಗೆ 2024-25 ನೇ ಸಾಲಿನಿಂದ ನಾಲ್ಕು ವರ್ಷಗಳ ತರಬೇತಿ ಅವಧಿಯಲ್ಲಿ ಶಿಷ್ಯವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಕಾನೂನು ತರಬೇತಿಯು 4 ವರ್ಷಗಳ ಅವಧಿಯಾಗಿದ್ದು, ಮಾಸಿಕ ರೂ.5000/- ಗಳನ್ನು ಶಿಷ್ಯವೇತನ ನೀಡಲಾಗುವುದು. ಅಭ್ಯರ್ಥಿಯು ಅಡ್ವೊಕೇಟ್ ಆಗಿ ಕಾರ್ಯ ನಿರ್ವಹಿಸಲು ನಿಗದಿಪಡಿಸಿದ ಕಾನೂನು ಪರೀಕ್ಷೆಯಲ್ಲಿ ತೇರ್ಗಡೆಯಾಗಿ 2 ವರ್ಷಗಳ ಅವಧಿಯೊಳಗಿದ್ದು, ವಯೋಮಿತಿ 30 ವರ್ಷದೊಳಗಿರಬೇಕು. ತಮ್ಮ ಹೆಸರನ್ನು ಬಾರ್ ಕೌನ್ಸಿಲ್ನಲ್ಲಿ ನೋಂದಾಯಿಸಿರಬೇಕು ಹಾಗೂ ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್ ಸರ್ಕಾರಿ ವಕೀಲರು ಅಥವಾ ಕನಿಷ್ಠ 20 ವರ್ಷಗಳ ವೃತ್ತಿ ಅನುಭವವಿರುವ ವಕೀಲರ ಅಧೀನದಲ್ಲಿ ತರಬೇತಿ ಪಡೆಯುವುದು. ಕುಟುಂಬದ ವಾರ್ಷಿಕ ಆದಾಯ ರೂ.3.50 ಲಕ್ಷ ಮೀರಿರಬಾರದು.
ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಇಲಾಖಾ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿದ ಆಗಸ್ಟ್ 13 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಅರ್ಜಿ ಹಾಗೂ ಹೆಚ್ಚಿನ ವಿವರಗಳಿಗೆ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, 1ನೇ ಮಹಡಿ, ಸತ್ಯಶ್ರೀ ಆರ್ಕೇಡ್, 5ನೇ ಪ್ಯಾರಲ್ ರಸ್ತೆ, ದುರ್ಗಿಗುಡಿ, ಶಿವಮೊಗ್ಗ ದೂ.ಸಂ: 08182-220206 ನ್ನು ಸಂಪರ್ಕಿಸುವುದು ಎಂದು ಪ್ರಕಟಣೆ ತಿಳಿಸಿದೆ.