ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಮೇರಿಟ್ ಹಾಗೂ ರೋಸ್ಟರ್ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಒಟ್ಟು 25 ಖಾಲಿ ಇರುವ ಹುದ್ದೆಗಳು ಅನೆಸ್ಥಿಯಾ-02, ಪಾರ್ಮಿಸ್ಟ-1, ಎಂ.ಬಿ.ಬಿ.ಎಸ್ ಮೆಡಿಕಲ್ ಆಪೀಸರ್-5, ಎಂಬಿಬಿಎಸ್ ಮೆಡಿಕಲ್ ಆಫೀಸ್- ನಮ್ಮ ಕ್ಲಿನಿಕ್-15, ಮೈಕ್ರೊಬಯೋಲಜಿಸ್ಟ್-1, ಜಿಲ್ಲಾ ಗುಣಮಟ್ಟ ಖಾತ್ರಿ ಸಲಹೆಗಾರರು-1 ಇದ್ದು, ಮತ್ತು ಎಂಬಿಬಿಎಸ್ ಹಾಗೂ ತಜ್ಞ ವೈದ್ಯರು ಹುದ್ದೆಗಳಿಗೆ ಪ್ರತಿ ಸೋಮವಾರ ಅರ್ಜಿ ಆಹ್ವಾನಿಸಿ ಹುದ್ದೆಗಳನ್ನು ಭರ್ತಿಮಾಡಿಕೊಳ್ಳಲಾಗುವುದು.
ಆಸಕ್ತ ಅಭ್ಯರ್ಥಿಗಳು, ಫೆಬ್ರವರಿ 10, 2025 ರಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:30 ಗಂಟೆಯವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಭಾಂಗಣದಲ್ಲಿ ನೇರ ಸಂದರ್ಶನಕ್ಕೆ ಹಾಜರಾಗಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರ್.ಸಿ.ಹೆಚ್ ಕಛೇರಿ ಎನ್.ಹೆಚ್.ಎಮ್ ವಿಭಾಗದಲ್ಲಿ ಕೆಲಸದ ಅವದಿಯಲ್ಲಿ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.