ನವದೆಹಲಿ: ತಂತ್ರಜ್ಞಾನ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ದೇಶದ ಪ್ರತಿಷ್ಠಿತ ರಿಲಯನ್ಸ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ರಿಲಯನ್ಸ್ ಫೌಂಡೇಶನ್, ದೇಶದಲ್ಲಿನ 100 ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ನೀಡಲು ಮುಂದಾಗಿದೆ. ಈ ಪೈಕಿ 40 ಜನ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ತಲಾ 6 ಲಕ್ಷ ರೂಪಾಯಿ ಹಾಗೂ 60 ಜನ ಪದವಿ ವಿದ್ಯಾರ್ಥಿಗಳಿಗೆ ತಲಾ 4 ಲಕ್ಷ ರೂಪಾಯಿ ವಿದ್ಯಾರ್ಥಿ ವೇತನ ನೀಡಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಶಾಕಿಂಗ್: ತವರು ಮನೆಗೆ ಹೋಗುತ್ತಾಳೆಂದು ಪತ್ನಿಯ ಕತ್ತನ್ನೇ ಸೀಳಿದ ಪಾಪಿ ಪತಿ…!
ಆರ್ಟಿಫಿಶಿಯಲ್ ಇಂಟೆಲಿಜೆನ್ಸ್, ಕಂಪ್ಯೂಟಿಂಗ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜನೀಯರಿಂಗ್, ಗಣಿತ, ಕಂಪ್ಯೂಟರ್ ಸೈನ್ಸ್ ನಲ್ಲಿ ಎಂಜನೀಯರಿಂಗ್ ಪದವಿಯ ಮೊದಲ ವರ್ಷದಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.
ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ https://www.scholarships.reliancefoundation.org/ ಗೆ ಭೇಟಿ ನೀಡಬಹುದಾಗಿದೆ.