ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಏಪ್ರಿಲ್ 18, 19ರಂದು ಸಿಇಟಿ ಪರೀಕ್ಷೆ ನಡೆಯಲಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ಅರ್ಜಿ ಸಲ್ಲಿಸಲು ಕೊನೆಯ ಅವಕಾಶ ನೀಡಿದೆ. ಮಾರ್ಚ್ 12 ರಿಂದ 15 ರವರೆಗೆ ಅರ್ಜಿ ಸಲ್ಲಿಸಬಹುದು. ವೈದ್ಯಕೀಯ, ದಂತ ವೈದ್ಯಕೀಯ, ಯುನಾನಿ, ಆಯುರ್ವೇದ, ಹೋಮಿಯೋಪತಿ, ಆರ್ಕಿಟೆಕ್ಚರ್, ಬಿಎಸ್,ಸಿ ಅಲೈಡ್ ಹೆಲ್ತ್ ಸೈನ್ಸ್, ಬಿಪಿಓ ಕೋರ್ಸ್ ಗಳಿಗೆ ಪ್ರವೇಶ ಬಯಸುವವರು ಕೂಡ ಸಿಇಟಿ 2024ಕ್ಕೆ ನೋಂದಾಯಿಸಿಕೊಂಡು ನಿಗದಿತ ಶುಲ್ಕ ಪಾವತಿಸುವುದು ಕಡ್ಡಾಯವಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ.