ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿ ಇದರ ಅಧೀನ ಬೋಧಕ ಅಸ್ಪತ್ರೆಗಳಲ್ಲಿ ಖಾಲಿ ಇರುವ 35 ಶುಶ್ರ್ರೂಷಕರ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಕರ್ತವ್ಯ ನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ.
ನಿಗದಿತ ಅರ್ಜಿ ನಮೂನೆಗಳನ್ನು ಈ ಸಂಸ್ಥೆಯ ಅಂತರ್ಜಾಲದಲ್ಲಿ www.kimskodagu.kar.nic.in ಪಡೆಯಬಹುದು. ಈ ಹುದ್ದೆಗಳನ್ನು 11 ತಿಂಗಳ ಅವಧಿಗೆ ಅಥವಾ ಖಾಯಂ ಶುಶ್ರೂಷಕರ ನೇಮಕಾತಿ ಆಗುವವರೆಗೆ ಅಥವಾ ಮುಂದಿನ ಸರ್ಕಾರಿ ಆದೇಶದವರೆಗೆ ಯಾವುದು ಮೊದಲೋ ಅಲ್ಲಿಯವರೆಗೆ ಗುತ್ತಿಗೆ ಆಧಾರದ ಮೇಲೆ ಮೆರಿಟ್ ಕಂ ರೋಸ್ಟರ್ ನಿಯಮ ಪಾಲಿಸಿ ಮೂಲ ದಾಖಲೆಗಳ ಪರಿಶೀಲನೆಗೆ ಆಹ್ವಾನಿಸಿ ಆಯ್ಕೆ ಮಾಡಲಾಗುವುದು.
ಅರ್ಜಿಯನ್ನು ಜುಲೈ 2 ರ ಸಂಜೆ 5 ಗಂಟೆಯ ಒಳಗೆ ಅರ್ಜಿ ಶುಲ್ಕದೊಂದಿಗೆ ನಿರ್ದೇಶಕರು ಹಾಗೂ ಡೀನ್ ಕೊಡಗು ವೈದ್ಯಕೀಯ ವಿಜಾÐನಗಳ ಸಂಸ್ಥೆ ಮಡಿಕೇರಿ ಇವರಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ಸಂಸ್ಥೆಯ ಕಚೇರಿಯನ್ನು ಸಂಪರ್ಕಿಸಬಹುದು.