
ಬೆಂಗಳೂರು: ನಿಗಮ -ಮಂಡಳಿಯ ಅಧ್ಯಕ್ಷರು, ಸದಸ್ಯರ ನೇಮಕಾತಿ ಜೊತೆಯಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ತಲಾ 5 ಮಂದಿಯಂತೆ ಒಟ್ಟು 10 ಮಂದಿ ರಾಜಕೀಯ ಕಾರ್ಯದರ್ಶಿಗಳನ್ನು ನೇಮಕ ಮಾಡುವ ಸಾಧ್ಯತೆ ಇದೆ.
ಶಾಸಕರಾದ ರಿಜ್ವಾನ್ ಅರ್ಷದ್, ಶ್ರೀನಿವಾಸ ಮನೆ ಸೇರಿದಂತೆ 10 ಮಂದಿಯನ್ನು ಸಿಎಂ ಮತ್ತು ಡಿಸಿಎಂ ರಾಜಕೀಯ ಕಾರ್ಯದರ್ಶಿಗಳಾಗಿ ನೇಮಕ ಮಾಡುವ ಕುರಿತಂತೆ ಚರ್ಚೆ ನಡೆದಿದ್ದು, ಎಲ್ಲವೂ ಅಂದುಕೊಂಡಂತೆ ನಡೆದರೆ ನಿಗಮ -ಮಂಡಳಿ ನೇಮಕಾತಿಯ ಜೊತೆಗೆ ಸಿಎಂ, ಡಿಸಿಎಂ ರಾಜಕೀಯ ಕಾರ್ಯದರ್ಶಿಗಳ ನೇಮಕಾತಿ ಕೂಡ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.