alex Certify BIG NEWS: ನಿಗಮ -ಮಂಡಳಿ ಜೊತೆಯಲ್ಲೇ ಸಿಎಂ, ಡಿಸಿಎಂಗೆ 10 ರಾಜಕೀಯ ಕಾರ್ಯದರ್ಶಿಗಳ ನೇಮಕ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಿಗಮ -ಮಂಡಳಿ ಜೊತೆಯಲ್ಲೇ ಸಿಎಂ, ಡಿಸಿಎಂಗೆ 10 ರಾಜಕೀಯ ಕಾರ್ಯದರ್ಶಿಗಳ ನೇಮಕ ಸಾಧ್ಯತೆ

ಬೆಂಗಳೂರು: ನಿಗಮ -ಮಂಡಳಿಯ ಅಧ್ಯಕ್ಷರು, ಸದಸ್ಯರ ನೇಮಕಾತಿ ಜೊತೆಯಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ತಲಾ 5 ಮಂದಿಯಂತೆ ಒಟ್ಟು 10 ಮಂದಿ ರಾಜಕೀಯ ಕಾರ್ಯದರ್ಶಿಗಳನ್ನು ನೇಮಕ ಮಾಡುವ ಸಾಧ್ಯತೆ ಇದೆ.

ಶಾಸಕರಾದ ರಿಜ್ವಾನ್ ಅರ್ಷದ್, ಶ್ರೀನಿವಾಸ ಮನೆ ಸೇರಿದಂತೆ 10 ಮಂದಿಯನ್ನು ಸಿಎಂ ಮತ್ತು ಡಿಸಿಎಂ ರಾಜಕೀಯ ಕಾರ್ಯದರ್ಶಿಗಳಾಗಿ ನೇಮಕ ಮಾಡುವ ಕುರಿತಂತೆ ಚರ್ಚೆ ನಡೆದಿದ್ದು, ಎಲ್ಲವೂ ಅಂದುಕೊಂಡಂತೆ ನಡೆದರೆ ನಿಗಮ -ಮಂಡಳಿ ನೇಮಕಾತಿಯ ಜೊತೆಗೆ ಸಿಎಂ, ಡಿಸಿಎಂ ರಾಜಕೀಯ ಕಾರ್ಯದರ್ಶಿಗಳ ನೇಮಕಾತಿ ಕೂಡ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...