alex Certify BIG NEWS : ಚುನಾವಣಾ ಕರ್ತವ್ಯಕ್ಕೆ ಶಿಕ್ಷಕರ ನಿಯೋಜನೆ : ಮಹತ್ವದ ಸೂಚನೆ ನೀಡಿದ ಆಯೋಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಚುನಾವಣಾ ಕರ್ತವ್ಯಕ್ಕೆ ಶಿಕ್ಷಕರ ನಿಯೋಜನೆ : ಮಹತ್ವದ ಸೂಚನೆ ನೀಡಿದ ಆಯೋಗ

ಬೆಂಗಳೂರು : ಚುನಾವಣಾ ಕರ್ತವ್ಯಕ್ಕೆ ಶಿಕ್ಷಕರ ನಿಯೋಜನೆ ಕುರಿತಂತೆ ಚುನಾವಣಾ ಆಯೋಗ ಮಹತ್ವದ ಸೂಚನೆ ನೀಡಿದೆ.

ಈ ಕುರಿತು ಜಂಟಿ ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುತ್ತೋಲೆ ಹೊರಡಿಸಿದ್ದು, ಮೇಲ್ಕಂಡ ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ನಿಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಶಿಕ್ಷಕರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸುವಾಗ ಈ ಕೆಳಕಂಡಂತೆ ಕ್ರಮವಹಿಸಬೇಕು ಎಂದು ಸೂಚನೆ ನೀಡಿದ್ದಾರೆ.

1. ಯಾವುದೇ ಶಾಲೆಯಲ್ಲಿ ಶೇಕಡಾ ನೂರಕ್ಕೆ ನೂರರಷ್ಟು ಎಲ್ಲಾ ಶಿಕ್ಷಕರನ್ನು ನಿಯೋಜಿಸಬಾರದು.
2. ಶಿಕ್ಷಕರನ್ನು ನಿಯೋಜಿಸುವಾಗ ರಜಾ ದಿನಗಳಲ್ಲಿ ಹಾಗೂ ಬೋಧನಾ ಸಮಯವನ್ನು ಹೊರತುಪಡಿಸಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸುವುದು.
3. Terminal illness ಹೊಂದಿರುವ ಶಿಕ್ಷಕರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಬಾರದು.
4. ಮುಂದಿನ 6 ತಿಂಗಳ ಅವಧಿಯಲ್ಲಿ ಸೇವೆಯಿಂದ ವಯೋನಿವೃತ್ತಿ ಹೊಂದಲಿರುವ ಶಿಕ್ಷಕರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಬಾರದು.
ಶಿಕ್ಷಕರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸುವಾಗ ಮೇಲ್ಕಂಡ ಅಂಶಗಳನ್ನು ಹಾಗೂ ಕಾಲಕ್ಕೆ ನೀಡುವ ಭಾರತ ಚುನಾವಣಾ ಆಯೋಗದ ಸುತ್ತೋಲೆ ಹಾಗೂ ಮಾರ್ಗಸೂಚಿಗಳನ್ವಯ ಕ್ರಮ ಕೈಗೊಳ್ಖಬೇಕೆಂದು ತಿಳಿಸಿದ್ದಾರೆ.


,

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...