ಬೆಂಗಳೂರು : ಚುನಾವಣಾ ಕರ್ತವ್ಯಕ್ಕೆ ಶಿಕ್ಷಕರ ನಿಯೋಜನೆ ಕುರಿತಂತೆ ಚುನಾವಣಾ ಆಯೋಗ ಮಹತ್ವದ ಸೂಚನೆ ನೀಡಿದೆ.
ಈ ಕುರಿತು ಜಂಟಿ ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುತ್ತೋಲೆ ಹೊರಡಿಸಿದ್ದು, ಮೇಲ್ಕಂಡ ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ನಿಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಶಿಕ್ಷಕರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸುವಾಗ ಈ ಕೆಳಕಂಡಂತೆ ಕ್ರಮವಹಿಸಬೇಕು ಎಂದು ಸೂಚನೆ ನೀಡಿದ್ದಾರೆ.
1. ಯಾವುದೇ ಶಾಲೆಯಲ್ಲಿ ಶೇಕಡಾ ನೂರಕ್ಕೆ ನೂರರಷ್ಟು ಎಲ್ಲಾ ಶಿಕ್ಷಕರನ್ನು ನಿಯೋಜಿಸಬಾರದು.
2. ಶಿಕ್ಷಕರನ್ನು ನಿಯೋಜಿಸುವಾಗ ರಜಾ ದಿನಗಳಲ್ಲಿ ಹಾಗೂ ಬೋಧನಾ ಸಮಯವನ್ನು ಹೊರತುಪಡಿಸಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸುವುದು.
3. Terminal illness ಹೊಂದಿರುವ ಶಿಕ್ಷಕರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಬಾರದು.
4. ಮುಂದಿನ 6 ತಿಂಗಳ ಅವಧಿಯಲ್ಲಿ ಸೇವೆಯಿಂದ ವಯೋನಿವೃತ್ತಿ ಹೊಂದಲಿರುವ ಶಿಕ್ಷಕರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಬಾರದು.
ಶಿಕ್ಷಕರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸುವಾಗ ಮೇಲ್ಕಂಡ ಅಂಶಗಳನ್ನು ಹಾಗೂ ಕಾಲಕ್ಕೆ ನೀಡುವ ಭಾರತ ಚುನಾವಣಾ ಆಯೋಗದ ಸುತ್ತೋಲೆ ಹಾಗೂ ಮಾರ್ಗಸೂಚಿಗಳನ್ವಯ ಕ್ರಮ ಕೈಗೊಳ್ಖಬೇಕೆಂದು ತಿಳಿಸಿದ್ದಾರೆ.