alex Certify 15 ದಿನಗಳಲ್ಲಿ ರೇರಾಗೆ ಅಧ್ಯಕ್ಷರ ನೇಮಕ: ಹೈಕೋರ್ಟ್ ಗೆ ಸರ್ಕಾರದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

15 ದಿನಗಳಲ್ಲಿ ರೇರಾಗೆ ಅಧ್ಯಕ್ಷರ ನೇಮಕ: ಹೈಕೋರ್ಟ್ ಗೆ ಸರ್ಕಾರದ ಮಾಹಿತಿ

ಬೆಂಗಳೂರು: ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ(ರೇರಾ) ಮೇಲ್ಮನವಿ ನ್ಯಾಯಾಧಿಕರಣಕ್ಕೆ 15 ದಿನಗಳಲ್ಲಿ ಅಧ್ಯಕ್ಷರನ್ನು ನೇಮಿಸುವುದಾಗಿ ಹೈಕೋರ್ಟ್ ಗೆ ರಾಜ್ಯ ಸರ್ಕಾರ ಭರವಸೆ ನೀಡಿದೆ.

ರೇರಾ ಮೇಲ್ಮನವಿ ನ್ಯಾಯಾಧಿಕರಣಕ್ಕೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡಲು ಸರ್ಕಾರಕ್ಕೆ ನಿರ್ದೇಶಸುವಂತೆ ಕೋರಿ ಬೆಂಗಳೂರಿನ ಮ್ಯಾಥ್ಯೂಸ್ ಮೊದಲಾದವರು ಸಲ್ಲಿಸಿರುವ ಅರ್ಜಿ ವಿಚಾರಣೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠದಲ್ಲಿ ನಡೆದಿದ್ದು, ರಾಜ್ಯ ಸರ್ಕಾರದಿಂದ ಈ ಬಗ್ಗೆ ಹೈಕೋರ್ಟ್ ಗೆ ಮಾಹಿತಿ ನೀಡಲಾಗಿದೆ.

ರಾಜ್ಯ ಸರ್ಕಾರದ ಪರ ಅಡ್ವಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಮಾತನಾಡಿ, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಅಧ್ಯಕ್ಷರ ಹೆಸರನ್ನೊಳಗೊಂಡ ಕಡತ ಕಳುಹಿಸಬೇಕಿದೆ. 15 ದಿನಗಳಲ್ಲಿ ನೇಮಕಾತಿ ಪೂರ್ಣಗೊಳಿಸಲಿದ್ದು, ಸದಸ್ಯರನ್ನು ಒಂದು ತಿಂಗಳಲ್ಲಿ ನೇಮಿಸಲಾಗುವುದು ಎಂದು ನ್ಯಾಯಪೀಠಕ್ಕೆ ತಿಳಿಸಿದ್ದಾರೆ. ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ ಅರ್ಜಿ ವಿಲೇವಾರಿ ಮಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...