
ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ ಇಲ್ಲಿದೆ. ರಾಜ್ಯದಲ್ಲಿ ಹೊಸದಾಗಿ 1 ಸಾವಿರ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಕಂದಾಯ ಇಲಾಖೆಯಲ್ಲಿ ಸಾರ್ವಜನಿಕರಿಗೆ ಮತ್ತಷ್ಟು ಅನುಕೂಲ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಸರ್ವೆ ಕೆಲಸಗಳು ವಿಳಂಬವಾಗುವುದನ್ನು ತಪ್ಪಿಸಲು ಸರ್ವೆಯರ್‌ಗಳ ಹುದ್ದೆಗಳನ್ನೂ ಭರ್ತಿ ಮಾಡಲಾಗುವುದು.
ಹೊಸದಾಗಿ 1 ಸಾವಿರ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ. ಸರ್ವೆಯರ್‌ಗಳ ಹುದ್ದೆಗಳನ್ನೂ ಭರ್ತಿ ಮಾಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.