ಬೆಂಗಳೂರು : ರಾಜ್ಯದ ಅಂಗನವಾಡಿ ಮಕ್ಕಳಿಗೆ ‘ಫಿಲ್ಟರ್ ನೀರು’ ಪೂರೈಕೆಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ರಾಜ್ಯದ ಅಂಗನವಾಡಿ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಅವರಿಗೆ ಫಿಲ್ಟರ್ ನೀರು ಪೂರೈಕೆ ಮಾಡಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಇಂದು ನಡೆದ ವಿಧಾನ ಸಭೆಯ ಅಧಿವೇಶನ ಸಮಯದಲ್ಲಿ ಬಂಗಾರಪೇಟೆ ಶಾಸಕರಾದ ನಾರಾಯಣಸ್ವಾಮಿ ಕೆ.ಎಂ. ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಬರುವ ಬಜೆಟ್ ನಲ್ಲಿ ಈ ಯೋಜನೆ ಅಳವಡಿಸಿಕೊಳ್ಳಲು ಮುಖ್ಯಮಂತ್ರಿಗಳಿಗೆ ಈಗಾಗಲೇ ಮನವಿ ಮಾಡಿಕೊಳ್ಳಲಾಗಿದೆ.ಅನೇಕ ಅಂಗನವಾಡಿ ಕಟ್ಟಡಗಳ ನಿರ್ಮಾಣ ಕಾರ್ಯ ಅರ್ಧದಲ್ಲಿದ್ದು, ಅವುಗಳನ್ನು ಪೂರ್ತಿಗೊಳಿಸಲು ಹಾಗೂ ಅಂಗನವಾಡಿ ಮಕ್ಕಳಿಗೆ ಶೌಚಾಲಯ ವ್ಯವಸ್ಥೆ ಒದಗಿಸಿಕೊಡಲು ಕ್ರಮ ಕೈಗೊಳ್ಳಬೇಕು ಎಂಬ ಶಾಸಕ ನಾರಾಯಣಸ್ವಾಮಿ ಅವರ ಒತ್ತಾಯಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ , ಆದಷ್ಟೂ ಈ ಬಗ್ಗೆ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಜೊತೆಗೆ ಸಂಬಂಧಪಟ್ಟ ಇಲಾಖೆಗೆ ಈ ಕುರಿತು ಸೂಚನೆ ನೀಡಲಿದ್ದೇನೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.