ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ; ನಾಲ್ವರ ರಕ್ಷಣೆ

ಕಾರವಾರ: ಬಿರುಗಾಳಿ ಮಳೆಯಿಂದಾಗಿ ಅಲೆಗಳ ಹೊಡೆತಕ್ಕೆ ಸಿಲುಕಿ ಮೀನುಗಾರಿಕಾ ಬೋಟ್ ವೊಂದು ಅರಬ್ಬಿ ಸಮುದ್ರದಲ್ಲಿ ಮುಳುಗಡೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಮಾವಿನಕುರ್ವೆ ಬಂದರು ವ್ಯಾಪ್ತಿಯಲ್ಲಿ ನಡೆದಿದೆ.

ಓಂ ಮಹಾಗಣಪತಿ ಹೆಸರಿನ ಬೋಟ್ ಸಮುದ್ರದಲ್ಲಿ ಮುಳುಗಡೆಯಾಗಿದೆ. ಬೋಟ್ ನಲ್ಲಿದ್ದ ನಾಲ್ವರು ಮೀನುಗರರನ್ನು ರಕ್ಷಿಸಲಾಗಿದೆ. ಈ ಬೋಟ್ ಮಹಾದೇವ ಕಾರ್ವಿ ಎಂಬುವವರಿಗೆಸೇರಿದ್ದು ಎನ್ನಲಾಗಿದೆ.

ಇಂದು ಬೆಳಿಗ್ಗೆ ಮೀನುಗಾರಿಕೆಗೆಂದು ತೆರಳಿದ್ದ ವೇಳೆ ಸಮುದ್ರದಲ್ಲಿ ಏಕಾಏಕಿ ಭಾರಿ ಗಾತ್ರದ ಅಲೆಗಳು ಆರಂಭವಾಗಿವೆ. ಬಿರುಗಾಳಿ ಜೊತೆಗೆ ಅಲೆಗಳ ಹೊಡೆತಕ್ಕೆ ಸಿಲುಕಿ ಬೋಟ್ ಸಂಪೂರ್ಣ ಮುಳುಗಡೆಯಾಗಿದೆ. ಇದನ್ನು ಗಮನಿಸಿದ ಇನ್ನೊಂದು ಬೋಟ್ ನವರು ನೀರಿನಲ್ಲಿ ಮುಳುಗುತ್ತಿದ್ದ ಮೀನುಗಾರರನ್ನು ರಕ್ಷಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read