alex Certify ಆರಗ ಜ್ಞಾನೇಂದ್ರ ತೀರ್ಥಹಳ್ಳಿಗೆ ಕಳಂಕ, ಮನುಷ್ಯನ ಬಣ್ಣದ ಬಗ್ಗೆ ಮಾತನಾಡಿರುವುದು ಘೋರ ಅಪರಾಧ : ಕಿಮ್ಮನೆ ರತ್ನಾಕರ್ ವಾಗ್ಧಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆರಗ ಜ್ಞಾನೇಂದ್ರ ತೀರ್ಥಹಳ್ಳಿಗೆ ಕಳಂಕ, ಮನುಷ್ಯನ ಬಣ್ಣದ ಬಗ್ಗೆ ಮಾತನಾಡಿರುವುದು ಘೋರ ಅಪರಾಧ : ಕಿಮ್ಮನೆ ರತ್ನಾಕರ್ ವಾಗ್ಧಾಳಿ

ಬೆಂಗಳೂರು : ಅರಗ ಜ್ಞಾನೇಂದ್ರ ತೀರ್ಥಹಳ್ಳಿಗೆ ಕಳಂಕ, ಮನುಷ್ಯನ ಬಣ್ಣದ ಬಗ್ಗೆ ಮಾತನಾಡಿರುವುದು ಘೋರ ಅಪರಾಧ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಾಗ್ಧಾಳಿ ನಡೆಸಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು ಗೃಹಚಿವರಾಗಿ, ಎಂಪಿಎಂ ಅಧ್ಯಕ್ಷರಾಗಿ ಮತ್ತು ಅನೇಕ ಜವಾಬ್ದಾರಿಯುತ ಸ್ಥಾನಗಳನ್ನು ಅರಗ ಜ್ಞಾನೇಂದ್ರ ಅವರು ನಿಭಾಯಿಸಿದ್ದಾರೆ. ಇಂತಹ ವ್ಯಕ್ತಿ ಬಾಯಿ ತಪ್ಪಿನಿಂದ ಹೇಳಿದೆ, ಕಣ್ತಪ್ಪಿನಿಂದ ಹೇಳಿದೆ ಎನ್ನುವ ವಯಸ್ಸು ಅಲ್ಲ ಜ್ಞಾನವೂ ಅಲ್ಲ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಾಗ್ಧಾಳಿ ನಡೆಸಿದರು.

ಅರಗ ಜ್ಞಾನೇಂದ್ರ ಅವರು ತೀರ್ಥಹಳ್ಳಿಗೆ ಕಳಂಕ, ಕುವೆಂಪು ಅವರು, ಅನಂತಮೂರ್ತಿ, ಗೋಪಾಲಗೌಡರು, ಬದ್ರಿನಾರಾಯಣ್ ಅವರಂತಹ ಸಂಸದೀಯ ಪಟುಗಳು ಗೆದ್ದುಬಂದಂತಹ ಕ್ಷೇತ್ರ ಇಂತಹ ಕ್ಷೇತ್ರಕ್ಕೆ ಅವಮಾನ ಮಾಡುತ್ತಿದ್ದಾರೆ. ಬಿಜೆಪಿಯ ಯಾವುದೇ ನಾಯಕರು ಅರಗ ಜ್ಞಾನೇಂದ್ರ ಅವರ ಈ ಹೇಳಿಕೆಯನ್ನು ಏಕೆ ಖಂಡಿಸುತ್ತಿಲ್ಲ, ಅವರ ಮನಸ್ಸಿನಲ್ಲಿಯೂ ಅದೇ ಆಲೋಚನೆ ಇದೆಯೇ? ಮೋದಿಯವರು ಸಹ ಇದೇ ಮನಸ್ಥಿತಿ ಹೊಂದಿರುವವರೆ, ಏಕೆಂದರೆ ಅವರ ಸಂಪುಟದ ಅನೇಕ ಸದಸ್ಯರು ಈ ತರಹದ ಹೇಳಿಕೆ ನೀಡಿದಾಗಲೂ ಸುಮ್ಮನಿದ್ದರು. ಅನಂರತಕುಮಾರ್ ಹೆಗಡೆ “ನಾವು ಸಂವಿಧಾನ ಬದಲಾಯಿಸಲು ಬಂದಿದ್ದೇವೆ ಹೇಳಿಕೆಯಿಂದ ಹಿಡಿದು ಯತ್ನಾಳರ ತನಕ ಇಂತಹ ಸಂವಿಧಾನ ವಿರೋಧಿ ಹೇಳಿಕೆ ನೀಡಿದರು ಯಾವುದೇ ಕ್ರಮ ತೆಗೆದುಕೊಂಡಿಲ್ಲ

ಅರಗ ಜ್ಞಾನೇಂದ್ರ ಅವರು ಕ್ಷಮೆ ಕೇಳಿ ಉಪಯೋಗವಿಲ್ಲ, ಅವರಿಂದ ರಾಜಿನಾಮೆ ಪಡೆಯಬೇಕು. ಖರ್ಗೆಯವರ ಹಾಗೂ ಈಶ್ವರ ಖಂಡ್ರೆ ಅವರ ಬಗ್ಗೆ ಹಗುರವಾಗಿ ಮಾತನಾಡಿರುವದರ ಜೊತೆಗೆ ಬಣ್ಣವೂ ಸೇರಿಕೊಂಡಿದೆ, ಇದಕ್ಕಿಂತ ದೊಡ್ಡ ಅಪರಾಧ ಇನ್ನಿಲ್ಲ. ಮನುಷ್ಯನ ಬಣ್ಣದ ಬಗ್ಗೆ ಮಾತನಾಡಿರುವುದು ಘೋರ ಅಪರಾಧ.
ಅರಗ ಅವರು “ನಾನು ಖರ್ಗೆಯವರ ಹೆಸರು ತೆಗೆದುಕೊಂಡಿಲ್ಲ ಎಂದು ಸುಳ್ಳು ಹೇಳಿದ್ದಾರೆ. ಸ್ಪೀಕರ್ಗೆ ದೂರು ಸಲ್ಲಿಸಲಾಗುವುದು, ಕೋರ್ಟಿಗೂ ಹೋಗಲಾಗುವುದು, ನಂದಿತಾ ಅವರ ಕೇಸಿನಲ್ಲೂ ಅತ್ಯಾಚಾರ ಎಂದು ಸುಳ್ಳು ಬಿಂಬಿಸಿದವರು ಅರಗ, ಪೊಲೀಸರನ್ನು ನಾಯಿಗಳು ಎಂದವರು, ಹೆಣ್ಣು ಮಕ್ಕಳು 7 ಗಂಟೆ ನಂತರ ಏಕೆ ಓಡಾಡಬೇಕು ಎಂದಂತಹ ವ್ಯಕ್ತಿ ಇವರು. ಖರ್ಗೆಯವರ ವಿಚಾರದಲ್ಲಿ ಕೇವಲ ವಿಷಾದ ವ್ಯಕ್ತಪಡಿಸುವುದು ಬೇಕಿಲ್ಲ, ನೇರವಾಗಿ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಬೃಹತ್ ಪತ್ರಿಭಟನೆ ಹಾಗೂ ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಾಗ್ಧಾಳಿ ನಡೆಸಿದರು.

 

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...