ಬೆಂಗಳೂರು: ಅಗ್ನಿಶಾಮಕ ಮತ್ತು ತುರ್ತು ಸೇವೆ ಇಲಾಖೆಗೆ 1,600 ಸಿಬ್ಬಂದಿಯನ್ನು ಹೊಸದಾಗಿ ನೇಮಕ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿ ಮಾಡಿಕೊಂಡ ನಂತರ ಒಂದು ವರ್ಷ ತರಬೇತಿ ನೀಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಗ್ನಿ ಅವಘಡದಂತಹ ಪರಿಸ್ಥಿತಿ ಎದುರಿಸಲು ಹೊಸ ಸಿಬ್ಬಂದಿಗೆ ಆರು ತಿಂಗಳ ವಿಶೇಷ ತರಬೇತಿ ನೀಡಲಾಗುವುದು. ಈ ವರ್ಷದಿಂದ ಆಯ್ಕೆಯಾಗದವರಿಗೆ ವಿಪತ್ತು ನಿರ್ವಹಣೆ ಬಗ್ಗೆ ಆರು ತಿಂಗಳು ತರಬೇತಿ ನೀಡಲಾಗುತ್ತದೆ. ಹೊಸದಾಗಿ 1,600 ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.