
ಶಿವಮೊಗ್ಗ: ಸಿ.ಪಿ. ಯೋಗೇಶ್ವರ್ ಸೇರ್ಪಡೆಯಿಂದಾಗಿ ಕಾಂಗ್ರೆಸ್ ಪಕ್ಷದ ನಾಯಕರು ಸಂಭ್ರಮಿಸುತಿದ್ದಾರೆ. ಆದರೆ, ನೈಜ ಸಂಗತಿ ಏನೆಂದರೆ ಚುನಾವಣೆಗೆ ಮೊದಲೇ ಕಾಂಗ್ರೆಸ್ ಸೋಲೊಪ್ಪಿಕೊಂಡಿದೆ ಎಂದು ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ತೀರ್ಥಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಕಾಲು ಶತಮಾನ ಇರುವ ಪಕ್ಷಕ್ಕೆ ಚನ್ನಪಟ್ಟಣ ಉಪ ಚುನಾವಣೆಗೆ ನಿಲ್ಲಿಸಲು ಒಬ್ಬ ಅಭ್ಯರ್ಥಿಯೂ ಇಲ್ಲದಂತಾಗಿದೆ. ಬೇರೆ ಪಕ್ಷದಿಂದ ಅಭ್ಯರ್ಥಿಯನ್ನು ತಂದು ನಿಲ್ಲಿಸುವ ದುರ್ಗತಿ ಕಾಂಗ್ರೆಸ್ ಪಕ್ಷಕ್ಕೆ ಬಂದಿದೆ ಎಂದು ಟೀಕಿಸಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಇಂತಹ ಸ್ಥಿತಿ ಬಂದಿರುವುದು ಶೋಚನೀಯ ಸಂಗತಿಯಾಗಿದೆ. ಇದೊಂದು ಅವಮಾನವಾಗಿದೆ ಎಂದು ಹೇಳಿದ ಅರಗ ಜ್ಞಾನೇಂದ್ರ, ಬಿಜೆಪಿ ಮತ್ತು ಜೆಡಿಎಸ್ ಪಕ್ಷವನ್ನು ಎದುರಿಸುವ ಶಕ್ತಿಯನ್ನು ಕಾಂಗ್ರೆಸ್ ಕಳೆದುಕೊಂಡಿದೆ. ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಎನ್.ಡಿ.ಎ. ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಹೇಳಿದ್ದಾರೆ.