
ಶಿವಮೊಗ್ಗ: ರಾಜ್ಯದಲ್ಲಿ ಮತಾಂತರ ನಿಷೇಧಕ್ಕಾಗಿ ಕಾನೂನು ತರುವ ಕುರಿತು ಗಂಭೀರ ಚಿಂತನೆ ನಡೆದಿದೆ ಎಂದು ಗೃಹಸಚಿವ ಆರೋಗ್ಯ ಜ್ಞಾನೇಂದ್ರ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಅವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ಮತಾಂತರಕ್ಕೆ ಯತ್ನಿಸಿದ್ದ ಇಬ್ಬರನ್ನು ಬಂಧಿಸಲಾಗಿದೆ.
ಸಾಗರ ತಾಲೂಕಿನ ತಾಳಗುಪ್ಪದಲ್ಲಿ ಹಿಂದೂ ಧರ್ಮದಿಂದ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸಿದ ಆರೋಪದಡಿ ಇಬ್ಬರನ್ನು ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜೋಗ ಫಾಲ್ಸ್ ನ ಅನಿಲ್ ಕುಮಾರ್ ಮತ್ತು ಅವರ ಪತ್ನಿ ಪ್ರಶಾಂತಿ ಬಂಧಿತರು ಎಂದು ಹೇಳಲಾಗಿದೆ.
ತಾಳಗುಪ್ಪದ ಜ್ಯೋತಿ ಎಂಬವರ ಪತಿ ಮೂರು ವರ್ಷಗಳ ಹಿಂದೆ ಮೃತಪಟ್ಟಿದ್ದಾರೆ. ಅವರ ಮನೆಗೆ ಬಂದಿದ್ದ ಪ್ರಶಾಂತಿ ಮತ್ತು ಅನಿಲ್ ಕುಮಾರ್ ಆಮಿಷವೊಡ್ಡಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಲು ಒತ್ತಾಯಿಸಿದ್ದರು ಎಂದು ಹೇಳಲಾಗಿದ್ದು, ಈ ಹಿನ್ನೆಲೆಯಲ್ಲಿ ಇಬ್ಬರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.