ಬೆಂಗಳೂರು: ವೀಕೆಂಡ್ ಕರ್ಫ್ಯೂ ನಡುವೆ ನಿಯಮ ಮೀರಿ ಅನಗತ್ಯವಾಗಿ ರೋಡಿಗಿಳಿದವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಬೆಂಗಳೂರಿನಲ್ಲಿ 1200 ವಾಹನಗಳನ್ನು ಸೀಜ್ ಮಾಡಲಾಗಿದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಜನ ವೀಕೆಂಡ್ ಕರ್ಫ್ಯೂ ಗೆ ಸಹಕರಿಸಬೇಕು. ಬೆಂಗಳೂರಿನಲ್ಲಿ ಕೊರೋನಾ ಹೆಚ್ಚಾಗುತ್ತಿದೆ. ಪೊಲೀಸ್ ಸಿಬ್ಬಂದಿ ತುಂಬಾ ಶ್ರಮಪಡುತ್ತಿದ್ದಾರೆ. ವೀಕೆಂಡ್ ಕರ್ಫ್ಯೂಗೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಜನರ ಓಡಾಟ, ವಾಹನ ಸಂಚಾರ ಕಡಿಮೆ ಇದೆ. ವೀಕೆಂಡ್ ಕರ್ಫ್ಯೂ ಮುಂದುವರಿಸಬೇಕೇ, ಬೇಡವೇ ಎಂಬುದರ ಬಗ್ಗೆ ತಜ್ಞರು ಸಲಹೆ ನೀಡಿದ ನಂತರ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.
ನಾಳೆ ಕಾಂಗ್ರೆಸ್ ಪಾದಯಾತ್ರೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ, ಇದು ಜೀವನ್ಮರಣದ ಸಮಯವಾಗಿದೆ. ಕೊರೋನಾ ಮುಕ್ತ ಕರ್ನಾಟಕ ಮಾಡಬೇಕಿದೆ ಎಂದರು.