ತುಮಕೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ ಮನೆಗೆ ಮುತ್ತಿಗೆ ವಿಚಾರಕ್ಕೆ ಸಂಬಂಧಿಸಿದಂತೆ ತುಮಕೂರಿನಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ಅಚ್ಚರಿ ಮಾಹಿತಿ ನೀಡಿದ್ದಾರೆ.
ಕಾಂಗ್ರೆಸ್ ಪಕ್ಷದ ಕೆಲವು ಕಾರ್ಯಕರ್ತರು ಸಚಿವರ ಮನೆಗೆ ಹೋಗಿದ್ದಾರೆ. ನನಗೆ ಬಂದ ಮಾಹಿತಿಯ ಪ್ರಕಾರ ಅವರು ಬೆಂಕಿ ಹಾಕಲು ಬಂದಿದ್ದರು. ಸಚಿವ ನಾಗೇಶ್ ಮನೆಗೆ ಬೆಂಕಿ ಹಚ್ಚಲು ಮುಂದಾಗಿದ್ದರು ಎಂದು ಹೇಳಿದ್ದಾರೆ.
ಈಗಾಗಲೇ ಪೊಲೀಸರು 15 ಜನರನ್ನು ವಶಕ್ಕೆ ಪಡೆದಿದ್ದಾರೆ. ಈ ರೀತಿಯಾದ ಗೂಂಡಾವರ್ತನೆ ನಮ್ಮಲ್ಲಿ ನಡೆಯಲ್ಲ ಎಂದು ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.