alex Certify BIG NEWS: ರಾಜ್ಯದಲ್ಲಿ ಮುನ್ನೆಚ್ಚರಿಕೆ ಕ್ರಮ, ಕೋರ್ಟ್ ತೀರ್ಪು ಪಾಲಿಸಬೇಕು; ಆರಗ ಜ್ಞಾನೇಂದ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ ಮುನ್ನೆಚ್ಚರಿಕೆ ಕ್ರಮ, ಕೋರ್ಟ್ ತೀರ್ಪು ಪಾಲಿಸಬೇಕು; ಆರಗ ಜ್ಞಾನೇಂದ್ರ

ಬೆಂಗಳೂರು: ರಾಜ್ಯದ ಎಲ್ಲಾ ಪೊಲೀಸರಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಜಿಲ್ಲಾಧಿಕಾರಿಗಳಿಗೆ ಶಾಲೆ, ಕಾಲೇಜುಗಳಿಗೆ ರಜೆ ನೀಡುವ ಅಧಿಕಾರ ನೀಡಲಾಗಿದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಕ್ರಮ ಕೈಗೊಳ್ಳಲಾಗಿದೆ. ಕೋರ್ಟ್ ತೀರ್ಪಿಗೆ ಎಲ್ಲರೂ ತಲೆಬಾಗಲೇಬೇಕು ಎಂದು ಅವರು ತಿಳಿಸಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಲು ಬಿಡುವುದಿಲ್ಲ. ಸಣ್ಣಪುಟ್ಟ ಗಲಾಟೆಯಾದರೆ ಎಚ್ಚರಿಕೆ ವಹಿಸಿ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದರು.

ಕರ್ನಾಟಕ ಶಾಂತಿಪ್ರಿಯರ ನಾಡಾಗಿದೆ. ಅನಾವಶ್ಯಕವಾಗಿ ಗೊಂದಲ ಮೂಡಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಎಲ್ಲರೂ ಶಾಂತಿ ಕಾಪಾಡಬೇಕು, ಕೋರ್ಟ್ ತೀರ್ಪು ಪಾಲಿಸಬೇಕೆಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...